ಮಡಿಕೇರಿ ಆ.21 : ಹಿಂದೂ ಜಾಗರಣಾ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಸತೀಶ್ ದಾವಣಗೆರೆ ಅವರ ಬಂಧನವನ್ನು ಖಂಡಿಸಿ ಹಿಂದೂ ಸಂಘಟನೆಗಳು ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಸಿದವು.
ಮಡಿಕೇರಿ, ವೀರಾಜಪೇಟೆ, ಪೊನ್ನಂಪೇಟೆ ಹಾಗೂ ಸೋಮವಾರಪೇಟೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಹಿಂದೂ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಗೌರಿಬಿದನೂರು ಪೊಲೀಸರು ಕೋಮುದ್ವೇಷ ಭಾಷಣದ ಕಾರಣ ನೀಡಿ ಸತೀಶ್ ಅವರನ್ನು ಮಧ್ಯರಾತ್ರಿ ಕಾನೂನು ಬಾಹಿರವಾಗಿ ಬಂಧಿಸಿದ್ದಾರೆ. ಪೊಲೀಸರ ಈ ಕ್ರಮ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಕುಕ್ಕೇರ ಅಜಿತ್, ಪ್ರಮುಖರಾದ ಮಹೇಶ್ ಕಡಗದಾಳು, ವಿನಯ್, ಕವನ್ ಕಾವೇರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಾಧ್ಯಕ್ಷ ಮನು ಮಂಜುನಾಥ್, ಉಪಾಧ್ಯಕ್ಷ ಜಗದೀಶ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್ ಮತ್ತಿತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.