ಮಡಿಕೇರಿ ಆ.21 : ಬಸ್ ಡಿಕ್ಕಿಯಾಗಿ ಹಾನಿಗೊಳಗಾದ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಪರಿಶೀಲಿಸಿದರು. ಅಪಘಾತ ನಡೆದ ತಿಮ್ಮಯ್ಯ ವೃತ್ತಕ್ಕೆ ಭೇಟಿ ನೀಡಿದ ಅವರು ಪೊಲೀಸ್ ಅಧಿಕಾರಿಗಳಿಂದ ಘಟನೆಯ ಕುರಿತು ಮಾಹಿತಿ ಪಡೆದರು. ಎಲ್ಲಾ ರಸ್ತೆಗಳು ಸೇರುವ ಪ್ರದೇಶ ಕಿರಿದಾಗಿದ್ದು, ವೈಜ್ಞಾನಿಕ ರೂಪದಲ್ಲಿ ವೃತ್ತವನ್ನು ಅಭಿವೃದ್ಧಿಪಡಿಸಿ ವಾಹನಗಳ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.








