ಮಡಿಕೇರಿ ಆ.21 : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯಲ್ಲಿ ಆ.24 ರಂದು ಸ್ವಚ್ಛತಾ ಕಾರ್ಯದ ಪ್ರಯುಕ್ತ ಮಧ್ಯಾಹ್ನ 2 ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕೆಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.







