ಮಡಿಕೇರಿ ಆ.20 : ಕೊಡಗು ವಿಶ್ವ ವಿದ್ಯಾನಿಲಯವು ಅಧ್ಯಾಪಕರ ಅಭಿವೃದ್ಧಿಯ ಮಹತ್ವವನ್ನು ಅರ್ಥಮಾಡಿಕೊಂಡು ಅಧ್ಯಾಪಕರಲ್ಲಿ ಕೌಶಲ್ಯ ಅಭಿವೃದ್ಧಿ, ಜ್ಞಾನ ಮತ್ತು ಬೋಧನಾ ವಿಧಾನಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಕೊಡಗು ವಿಶ್ವ ವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಡಾ.ಸೀನಪ್ಪ ತಿಳಿಸಿದ್ದಾರೆ.
ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರಿನ ಫೋರ್ಕ್ ಟೆಕ್ನಾಲಜಿಸ್ ಹಾಗೂ ಕೊಡಗು ವಿಶ್ವ ವಿದ್ಯಾನಿಲಯದ ಸಂಯುಕ್ತಾಶ್ರಯದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಎರಡು ವಾರಗಳ ಕಾಲ ವಿವಿಧ ಕಾಲೇಜುಗಳ ಅಧ್ಯಾಪಕರಿಗೆ ನಡೆಯುವ “ಅಧ್ಯಾಪಕರ ಅಭಿವೃದ್ಧಿ ಕಾರ್ಯಾಗಾರ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೂತನವಾಗಿ ಆರಂಭವಾಗಿರುವ ಕೊಡಗು ವಿಶ್ವವಿದ್ಯಾನಿಲಯವು ಶೈಕ್ಷಣಿಕ ಪ್ರಗತಿಯಲ್ಲಿ ಪ್ರಮುಖ ಮೈಲಿಗಲ್ಲನ್ನು ಹೊಂದಿದ್ದು, ವಿದ್ಯಾರ್ಥಿಗಳ ಮನಸ್ಸು ಮತ್ತು ಸಮಾಜದ ಭವಿಷ್ಯವನ್ನು ರೂಪಿಸುವ ಸಲುವಾಗಿ ಬೋಧನಾ ವಿಭಾಗದ ಸದಸ್ಯರ ಕೌಶಲ್ಯ ಮತ್ತು ಸಾಮಥ್ರ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಆರಂಭಿಕ ಹಂತವಾಗಿ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಇಂದಿನ ವೇಗದ ಮತ್ತು ನಿರಂತರವಾಗಿ ವಿಕಸನಗೊಳ್ಳುತ್ತಿರುವ ಜಗತ್ತಿನಲ್ಲಿ, ಅಧ್ಯಾಪಕರು ನವೀಕೃತವಾಗಿರುವುದು ಬಹಳ ಮುಖ್ಯ. ಶಿಕ್ಷಣ ಕ್ಷೇತ್ರದಲ್ಲಿ ಆಧುನಿಕ ಯುಗದ ಸವಾಲುಗಳನ್ನು ಎದುರಿಸುವ ಸಲುವಾಗಿ ಅಧ್ಯಾಪಕರುಗಳಿಗೆ ನವೀನ ಬೋಧನಾ ವಿಧಾನಗಳು, ಪರಿಣಾಮಕಾರಿ ತರಗತಿ ನಿರ್ವಹಣೆ, ಸಂಶೋಧನಾ ವಿಧಾನಗಳು, ಸುಧಾರಿತ ಶಿಕ್ಷಣ ವಿಧಾನಗಳು ಮತ್ತು ಶಿಕ್ಷಣದಲ್ಲಿ ತಂತ್ರಜ್ಞಾನದ ಏಕೀಕರಣ, ಬೋಧನಾ ಕೌಶಲ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡುವ ಸಲುವಾಗಿ ಅಧ್ಯಾಪಕರಿಗೆ ವಿವಿಧ ತರಬೇತಿಗಳನ್ನು ನೀಡಲಾಗುತ್ತಿದೆ ಎಂದರು.
ಕೊಡಗು ವಿಶ್ವ ವಿದ್ಯಾನಿಲಯದ ಸ್ಥಾಪನೆ ಬಹುಕಾಲದ ಕನಸಾಗಿದ್ದು, ವಿಶ್ವ ವಿದ್ಯಾನಿಲಯದಡಿಯಲ್ಲಿರುವ ಎಲ್ಲಾ ಸಂಸ್ಥೆಗಳ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸಲಾಗುವುದು. ಕುಶಾಲನಗರದ ಚಿಕ್ಕ ಅಳುವಾರದ ಜ್ಞಾನ ಕಾವೇರಿ ಕ್ಯಾಂಪಸ್‍ನಲ್ಲಿ 2022ರಲ್ಲಿ ಸ್ಥಾಪಿತವಾದ ಕೊಡಗು ವಿಶ್ವ ವಿದ್ಯಾನಿಲಯ ತನ್ನ ಕಾರ್ಯವನ್ನು ಪ್ರಾರಂಭಿಸಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಸ್ಥೆಯು ಅಪಾರ ಸಾಮಥ್ರ್ಯವನ್ನು ಹೊಂದಿದೆ. ಜನಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿಗಳು ವಿಶ್ವವಿದ್ಯಾನಿಲಯದ ಅಭಿವೃದ್ಧಿಗೆ ಭೂಮಿ ಮತ್ತು ಮೂಲ ಸೌಕರ್ಯ ಒದಗಿಸಲು ಸಹಕಾರ ನೀಡಬೇಕೆಂದು ಮನವಿ ಮಾಡಿದ ಡಾ.ಸೀನಪ್ಪ, ವಿಶ್ವ ವಿದ್ಯಾನಿಲಯದ ಮುಂದಿರುವ ಸವಾಲುಗಳು ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ, ಕೊಡಗು ವಿಶ್ವವಿದ್ಯಾನಿಲಯ ದೂರ ದೃಷ್ಟಿಯನ್ನು ಇಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿದೆ. ವಿಶ್ವ ವಿದ್ಯಾನಿಲಯ ಒಳಗೊಂಡಿರುವ 22 ಕಾಲೇಜುಗಳ ಅಧ್ಯಾಪಕರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಂಡು ಕ್ರಾಂತಿಕಾರಿ ಬದಲಾವಣೆ ಮಾಡುತ್ತಿದೆ. ಬೋಧಕ ವರ್ಗ ಇಂದಿನ ತಾಂತ್ರಿಕತೆಗೆ ಹೊಂದಿಕೊಂಡು ವಿದ್ಯಾರ್ಥಿಗಳಲ್ಲಿ ಬದಲಾವಣೆ ತರಲು ಈ ತರಬೇತಿ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು.
ಕೊಡಗು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿಲ್ಲ ಎಂಬ ಉದ್ದೇಶದಿಂದ ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಿಗೆ ತೆರಳುತ್ತಿದ್ದು, ಈ ಮನೋಭಾವನೆಯನ್ನು ದೂರ ಮಾಡುವ ಕೆಲಸವಾಗಬೇಕು. ಜಿಲ್ಲೆಯಲ್ಲಿ ಸಮರ್ಥ ಶಿಕ್ಷಕರಿದ್ದು, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮತ್ತು ಉತ್ತಮ ಅಂಕ ದೊರೆಯುತ್ತಿದೆ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಬೆಂಗಳೂರಿನ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತುದಾರ ಅವಿನಾಶ್, ನವೀನ ತಂತ್ರಜ್ಞಾನವನ್ನು ಅವಳಡಿಸಿಕೊಂಡು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಕುರಿತು ಕಾರ್ಯಾಗಾರದಲ್ಲಿ ಅಧ್ಯಾಪಕರಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಪ್ಪ ಕಾಲೇಜಿನ ಪ್ರೊ.ಈ.ತಿಪ್ಪೇಸ್ವಾಮಿ, ಪ್ರೊ.ಗಾಯತ್ರಿದೇವಿ, ಪ್ರೊ.ಕೃಷ್ಣ ಹಾಗೂ ವಿವಿಧ ಕಾಲೇಜುಗಳ ಅಧ್ಯಾಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜು ಸಿಬ್ಬಂದಿ ಚಂದ್ರಾವತಿ ಪ್ರಾರ್ಥಿಸಿ, ಎಂ.ಎ.ಕೊಡವ ವಿಭಾಗದ ಸಂಯೋಜಕ ರವಿಶಂಕರ್ ನಾಣಯ್ಯ ನಿರೂಪಿಸಿ, ಆಂಗ್ಲ ವಿಭಾಗದ ಸಂಯೋಜಕ ಪ್ರೊ.ಪೂಣಚ್ಚ ವಂದಿಸಿದರು.
Breaking News
- *ಕೊಡಗು ಪತ್ರಿಕಾ ಭವನ ಟ್ರಸ್ಟ್ ನಿಂದ ಗಣರಾಜ್ಯೋತ್ಸವ ಆಚರಣೆ*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಗೌರವಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಗಣತಂತ್ರ ಹಬ್ಬದ ಮೂಲಕ ನಮ್ಮ ದೇಶದ ಸಾಂವಿಧಾನಿಕ ಅನನ್ಯತೆಯನ್ನು ಸಾರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನದ ಆಶಯಗಳಿಗೆ ಬದ್ಧರಾಗಿರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*