ಮಡಿಕೇರಿ ಆ.20 : ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಕೊಡಗಿನ ವಿವಿಧೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ನಗರದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ, ಶ್ರೀ ದಂಡಿನ ಮಾರಿಯಮ್ಮ ದೇವಾಲಯ, ಶ್ರೀ ಕೋಟೆ ಮಾರಿಯಮ್ಮ ದೇವಾಲಯ, ಬ್ರಾಹ್ಮಣರ ಬೀದಿಯ ಅಶ್ವತ್ಥ ಕಟ್ಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ನಾಗನಕಲ್ಲಿಗೆ ಹಾಲಿನ ಅಭಿಷೇಕ, ಅಲಂಕಾರ ಪೂಜೆ, ಎಳನೀರಭಿಷೇಕ, ಕ್ಷೀರಾಭಿಷೇಕ, ಸಂಕಲ್ಪ ಪೂಜೆ ಮಹಪೂಜೆ ಹಾಗೂ ವಿಶೇಷ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಗನ ಕಲ್ಲಿಗೆ ಪುಷ್ಪಾರ್ಚನೆ ಮತ್ತು ಹಾಲಿನ ಅಭಿಷೇಕ ಮಾಡಿದರು.