ಮಡಿಕೇರಿ ಆ.21 : ನಗರದಂಚಿನಲ್ಲಿರುವ ಕೊಡಗು ವೈದ್ಯಕೀಯ ಕಾಲೇಜ್ ನಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ವೈದ್ಯಕೀಯ ಕಾಲೇಜು ಆವರಣದಲ್ಲಿ ಕಳೆದ ಹಲವು ತಿಂಗಳಿನಿಂದ ಪುಂಡರು ಓಡಾಡುತ್ತಿದ್ದಾರೆ. ವಿದ್ಯಾರ್ಥಿನಿಯರ ವಸತಿ ನಿಲಯದ ಬಳಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಕಾಲೇಜಿಗೆ ಕನಿಷ್ಟ ಭದ್ರತಾ ದೃಷ್ಟಿಯಿಂದ ಮುಖ್ಯ ದ್ವಾರವೂ ಇಲ್ಲ, ಸಿಸಿ ಕ್ಯಾಮರವೂ ಗುಣಮಟ್ಟದಲ್ಲಿಲ್ಲ, ಸೂಕ್ತ ರಕ್ಷಣೆೆಯೂ ಇಲ್ಲವೆಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ತೀವ್ರ ಆತಂಕ ವ್ಯಕ್ತಪಡಿಸಿದರು.
ಪುಂಡರ ಹಾವಳಿಯ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ದೂರು ಸಲ್ಲಿಸಿ, ಸೂಕ್ತ ರಕ್ಷಣೆ ಒದಗಿಸುವಂತೆ ಮನವಿ ಮಾಡಲಾಗಿತ್ತು. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ, ಪುಂಡರ ಹಾವಳಿ ಮುಂದುವರೆದಿದೆ. ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಸಿಸಿಟಿವಿ ಇದೆ. ಕ್ಯಾಂಪಸ್‌ನಲ್ಲಿ ಉರಿಯದ ಬೀದಿ ದೀಪಗಳಿವೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ವೈದ್ಯಕೀಯ ಕಾಲೇಜಿನ ಸುಮಾರು ಆರು ನೂರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಕಾಲೇಜಿನ ಡೀನ್ ಕಾರ್ಯಪ್ಪ ಹಾಗೂ ಸಿಬ್ಬಂದಿಗಳು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಕಾಲೇಜು ಕ್ಯಾಂಪಸ್ ಗೆ ಸೂಕ್ತ ದ್ವಾರ ನಿರ್ಮಿಸಿ ಭದ್ರತಾ ಸಿಬ್ಬಂದಿಗಳನ್ನು ನಿಯುಕ್ತಿಗೊಳಿಸಲಾಗುವುದು. ಈಗಾಗಲೇ 70 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿ ಶೀಘ್ರ ಆರಂಭಗೊಳ್ಳಲಿದೆ. ಗುಣಮಟ್ಟದ ಸಿಸಿ ಟಿವಿಯನ್ನು ಅಳವಡಿಸಿ, ಅಗತ್ಯ ದೀಪಗಳ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
Breaking News
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*