ಮಡಿಕೇರಿ ಆ.22 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ವತಿಯಿಂದ ಸಣ್ಣ ಕಥೆಗಳ ಗೌರಮ್ಮ ಕಥಾ ಸ್ಪರ್ಧೆಯು ಆ.24 ರಂದು 10.30 ಗಂಟೆಗೆ ಮಡಿಕೇರಿಯ ಸರಕಾರಿ ಜೂನಿಯರ್ ಕಾಲೇಜಿನ
ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಕಥಾಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಕಥ ರಚನೆ ಮಾಡುವ ಕುರಿತು ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ ನಡೆಸಲಿದ್ದಾರೆ.
ಸಣ್ಣ ಕಥೆಗಳ ರಚನಾಕ್ರಮದ ಕುರಿತು ಜಿಲ್ಲೆಯ ಹಿರಿಯ ಸಾಹಿತಿ ಗಿರೀಶ್ ಕಿಗ್ಗಾಲು ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಲಾಭಿವೃಧ್ಧಿ ಸಮಿತಿ ಅಧ್ಯಕ್ಷ ಆರ್.ಪಿ. ಚಂದ್ರಶೇಖರ್, ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದ ಪ್ರಭಾರ ಉಪಪ್ರಾಂಶುಪಾಲರು ಕೆ.ವಿ.ಶಶಿಕಲಾ, ನಿವೃತ್ತ ಉಪಪ್ರಾಂಶುಪಾಲರಾದ ಪಿ.ಕೆ. ನಳಿನಿ ಭಾಗವಹಿಸಲಿದ್ದಾರೆ.
ನಂತರ ಕೊಡಗಿನ ಪ್ರೌಡಶಾಲಾ ಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಕುರಿತು ಸ್ಪರ್ಧೆ ನಡೆಯಲಿದೆ ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.