ಸುಂಟಿಕೊಪ್ಪ, ಆ.22 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ ಮತ್ತು ಶ್ತೀ ಮುತ್ತಪ್ಪ ದೇವಾಲಯಲ್ಲಿ ಶ್ರದ್ಧಾಭಕ್ತಿಯಿಂದ ನಾಗರ ಪಂಚಮಿ ಆಚರಿಸಲಾಯಿತು.
ದೇವಾಲಯದ ಮುಖ್ಯ ಅರ್ಚಕ ಮಂಜುನಾಥ ಉಡುಪ ಮತ್ತು ಹಿರಿಯ ಅರ್ಚಕ ಹಾ.ಮಾ.ಗಣೇಶ ಶರ್ಮಾ ನೇತೃತ್ವದಲ್ಲಿ ಕುಂಕುಮ, ಹಾಲು, ಎಳೆನೀರು ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು.
ನಂತರ ನಾಗ ದೇವರುಗೆ ಹೂವಿನ ಅಲಂಕಾರ, ಮಹಾಪೂಜೆ, ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಿತು.