ಮಡಿಕೇರಿ ಆ.22 : ಮಾಜಿ ಸೈನಿಕರ ಅನುಕೂಲಕ್ಕಾಗಿ ನಗರದ ಮಹದೇವಪೇಟೆಯಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಸುಸಜ್ಜಿತ ಕಚೇರಿಯನ್ನು ತೆರೆಯಲಾಗಿದ್ದು, ಆ.25 ರಂದು ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಕೊಟ್ಟುಕತ್ತಿರ ಪಿ.ಸೋಮಣ್ಣ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30 ಗಂಟೆಗೆ ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ ಕಚೇರಿಯನ್ನು ಉದ್ಘಾಟಿಸಲಿದ್ದು, ಮಾಜಿ ಸೈನಿಕರು ಹಾಗೂ ಕುಟುಂಬದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಅಖಿಲ ಕರ್ನಾಟ ಮಾಜಿ ಸೈನಿಕರ ಸಂಘವು 15 ನವೆಂಬರ್ 2021ರಲ್ಲಿ ಅಧಿಕೃತವಾಗಿ ವಿರಾಜಪೇಟೆಯಲ್ಲಿ ಉದ್ಘಾಟನೆಗೊಂಡು ಮೊದಲ ಸರ್ವ ಸದಸ್ಯರ ಸಭೆಯನ್ನು ಮಡಿಕೇರಿಯಲ್ಲಿ ನಡೆಸಿ ಎರಡನೇ ಸರ್ವ ಸದಸ್ಯರ ಸಭೆಯನ್ನು ವಿರಾಜಪೇಟೆಯಲ್ಲಿ ಯಶಸ್ವಿಯಾಗಿ ನಡೆಸಿದೆ.
ಈ ವರೆಗೆ ಸಂಘವು ಹಲವು ಕಾರ್ಯಕ್ರಮಗಳನ್ನು ನಡೆಸಿದ್ದು, ಮಾಜಿ ಸೈನಿಕರ ಕಷ್ಟಕ್ಕೆ ಸ್ಪಂದಿಸಿದೆ. ಅಲ್ಲದೆ ಮಾಜಿ ಸೈನಿಕರ ಸೌಲಭ್ಯಗಳಿಗಾಗಿ ಸಕರಾತ್ಮಾಕ ಹೋರಾಟ ನಡೆಸಿದ್ದು, ಕೆಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಯಶಸ್ಸು ಕಂಡಿದ್ದು, ಹಲವು ಸಮಸ್ಯೆಗಳು ಬಾಕಿ ಉಳಿದುಕೊಂಡಿದೆ ಎಂದರು.
ಈ ನಿಟ್ಟಿನಲ್ಲಿ ಮಾಜಿ ಸೈನಿಕರಿಗೆ, ವಿದವಾ ವೇತನ ಪಡೆಯುತ್ತಿರುವ ಮಾಜಿ ಸೈನಿಕರ ಪತ್ನಿಯರಿಗೆ ಅವರ ಅಹವಾಲು ತಿಳಿಸಲು ಸೂಕ್ತ ಸ್ಥಳವಿಲ್ಲದನ್ನು ಮನಗಂಡು ಮಡಿಕೇರಿಯ ಮಹದೇವಪೇಟೆಯಲ್ಲಿರುವ ಕಾವೇರಿ ಕಟ್ಟಡ ಮೊದಲನೆ ಮಹಡಿಯಲ್ಲಿ ಸುಸಜ್ಜಿತ ಕಚೇರಿಯನ್ನು ತೆರೆಯಲು ತೀರ್ಮಾನಿಸಿದೆ ಎಂದು ತಿಳಿಸಿದರು.
ಬಸ್ ಅಪಘಾತದಲ್ಲಿ ನೆಲಕ್ಕುರುಳಿದ ಜನರಲ್ ತಿಮ್ಮಯ್ಯ ಪ್ರತಿಮೆಯನ್ನು ತಕ್ಷಣವೇ ಮರುಸ್ಥಾಪಿಸುವಂತಾಗಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಸಹಾಯಕ ಕಾರ್ಯದರ್ಶಿ ಪ್ರಭಾಕರ, ಸಂಚಾಲಕರಾದ ಪಿ.ಎಸ್.ವಾಸು, ಚಂದನ, ಪಿ.ಕೆ.ಕುಟ್ಟಪ್ಪ, ಸಿ.ಜಿ.ತಿಮ್ಮಯ್ಯ ಹಾಜರಿದ್ದರು.
Breaking News
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*
- *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆ*