ಮಡಿಕೇರಿ ಆ.23 : ಕೋಟ್ಯಂತರ ಭಾರತೀಯರು ಕಾತುರದಿಂದ ಕಾಯುತ್ತಿರುವ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲ್ಮೈಯಲ್ಲಿ ಇಳಿಯಲಿ, ಆ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳ ದಶಕಗಳ ಪರಿಶ್ರಮ ಕೈಗೂಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ನಾನು ಕೂಡ ಉತ್ಸುಕನಾಗಿದ್ದೇನೆ ಎಂದರು.