ಮಡಿಕೇರಿ, ಆ. 23: ವೀರ ಲೋಕ ಪುಸ್ತಕ ಪ್ರಕಾಶನ ಸಂಸ್ಥೆಯು ರಾಜ್ಯಾಂದ್ಯಂತ ಆಯೋಜಿಸಿರುವ ಕಥಾ ಕಮ್ಮಟ ಯೋಜನೆಯಂತೆ ಕೊಡಗಿನಲ್ಲೂ ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕವು ಕೈ ಜೋಡಿಸಿ ಅಕ್ಟೋಬರ್ 7-8 ರಂದು ಮಡಿಕೇರಿಯಲ್ಲಿ ಕಥಾ ಕಮ್ಮಟವನ್ನು ಉಚಿತ ಕಥಾ ಶಿಬಿರವನ್ನು ಉಚಿತವಾಗಿ ಆಯೋಜಿಸಲಾಗಿದೆ.
ಹಿರಿಯ ಸಾಹಿತಿ, ಬರಹಗಾರ ಪ್ರಭಾಕರ ಶಿಶಿಲ ಅವರು ಶಿಬಿರವನ್ನು ನಡೆಸಿಕೊಡಲಿದ್ದಾರೆಂದು ವೀರಲೋಕ ಜಿಲ್ಲಾ ಸಂಚಾಲಕ, ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ತಿಳಿಸಿದ್ದಾರೆ.
ಶಿಬಿರದ ಸಂಚಾಲಕರಾಗಿ ಸಂಪತ್‍ಕುಮಾರ್ ಹಾಗೂ ಸಹ ಸಂಚಾಲಕರಾಗಿ ಕನ್ನಡ ಸಾಹಿತ್ಯ ಪರಿಷತ್‍ನ ಪ್ರಧಾನ ಕಾರ್ಯದರ್ಶಿ ರೇವತಿ ರಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಶಿಬಿರವು ವೀರಲೋಕ ಪ್ರಕಾಶನದ ಮುಖ್ಯಸ್ಥ ಶ್ರೀನಿವಾಸ್, ಸಾಹಿತಿಗಳಾದ ಕಾ.ತ.ಚಿಕ್ಕಣ್ಣ ಮತ್ತು ಲಕ್ಷಣ ಕೊಡಸೆ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ.
35 ವರ್ಷ ವಿೂರದ ಶಿಭಿರಾರ್ಥಿಗಳು, ನಿಗಧಿತ ಅರ್ಜಿಯಲ್ಲಿ ವಿವರಗಳನ್ನು ಸೆಪ್ಟೆಂಬರ್ 30ರ ಒಳಗೆ ಬಿ.ಜಿ. ಅನಂತಶಯನ, ದೇಸಿ ಜಗಲಿ ಕಥಾ ಕಮ್ಮಟ, ‘ಚಿರಂತನ’ ಕಾನ್ವೆಂಟ್ ಜಂಕ್ಷನ್, ಮಡಿಕೇರಿ, 571201. ಇಲ್ಲಿಗೆ ಕಳುಹಿಸುವುದು. ಮೊದಲ 35 ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು.
ಅರ್ಜಿ ನಮೂನೆಗೆ ಸಂಪತ್‍ಕುಮಾರ್, 9448614999 ಇವರನ್ನು ಸಂಪರ್ಕಿಸಿ.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*