ಮಡಿಕೇರಿ ಆ.23 : ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಸಾಮಥ್ರ್ಯ ಸೌಧದಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಜಿ.ಪಂ.ಸಿಇಒ ವರ್ಣಿತ್ ನೇಗಿರವರ ನೇತೃತ್ವದಲ್ಲಿ ನಡೆಯಿತು.
ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಗತಿ ಕುಂಠಿಗೊಂಡಿದ್ದು ತ್ವರಿತವಾಗಿ ಪ್ರಗತಿ ಸಾಧಿಸಿ, ಗ್ರಾಮ ಪಂಚಾಯಿತಿಗಳಲ್ಲಿ ಶೂನ್ಯ ಮಾನವ ದಿನಗಳ ಸೃಜನೆಯಾಗದಂತೆ ಕ್ರಮ ವಹಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಭಾರತ್ ನಿರ್ಮಾಣ್ ಸೇವಾ ಕೇಂದ್ರ, NRLM WORK SHED ಕಾಮಗಾರಿಗಳನ್ನು ಆರ್ಥಿಕ ವರ್ಷದಲ್ಲೆ ಪೂರ್ಣಗೊಳಿಸಿಲು ತಿಳಿಸಿದರು.
ಸ್ವಚ್ಚ ಭಾರತ್ ಮೀಷನ್ ಯೋಜನೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಕಸವನ್ನು ವ್ಯವಸ್ಥಿತವಾಗಿ ನಿರ್ವಹಿಸಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಜಿ.ಪಂ.ಸಿಇಒ ಅವರು ಹೇಳಿದರು.
ವಸತಿ ಯೋಜನೆಯಡಿ ತಾಲ್ಲೂಕಿನಲ್ಲಿ ಮಳೆಗೆ ಹಾನಿಯಾದ ಮನೆಗಳ ಕುರಿತು ಮಾಹಿತಿ ಪಡೆದು ಪ್ರಗತಿ ಸಾಧಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ವರ್ಣಿತ್ ನೇಗಿ ಅವರು ಸೂಚಿಸಿದರು.
ಜಿ.ಪಂ.ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಕಾಲಮಿತಿ ಒಳಗೆ ಗ್ರಾಮ ಪಂಚಾಯಿತಿಗಳಲ್ಲಿ ಪ್ರಗತಿ ಸಾಧಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿರಾಜಪೇಟೆ ತಾ.ಪಂ.ಇಒ ಕೆ.ಸಿ.ಅಪ್ಪಣ್ಣ, ವಿರಾಜಪೇಟೆ/ ಪೊನ್ನಂಪೇಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ತಾಂತ್ರಿಕ ಸಿಬ್ಬಂದಿಗಳು ಹಾಗೂ ತಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*