ಮಡಿಕೇರಿ ಆ.23 : ಪ್ರಸಕ್ತ(2023-24) ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಪಿಎಂಕೆಎಸ್‍ವೈ) ಯಡಿಯಲ್ಲಿ ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಡಿ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ (ಕಾಫಿ, ಟೀ, ರಬ್ಬರ್ ಹೊರತುಪಡಿಸಿ) ಹನಿ ನೀರಾವರಿ ಅಳವಡಿಕೆಗಾಗಿ ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುತ್ತದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ 2 ಹೆ. ಪ್ರದೇಶದವರೆಗೆ ಶೇ.90ರ ಸಹಾಯಧನ ಮತ್ತು ಇತರೆ ರೈತರಿಗೆ ಶೆ.75ರ ಸಹಾಯಧನ ನೀಡಲಾಗುವುದು. ಹಾಗೂ 2 ಹೆ. ರಿಂದ 5ಹೆ. ಪ್ರದೇಶದವರೆಗೆ ಶೇ. 45 ರ ಸಹಾಯಧನ ನೀಡಲಾಗುವುದು.
ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನದಲ್ಲಿ ತಾಳೆ ಬೆಳೆಯನ್ನು ಇಲಾಖಾ ಪಾಲುದಾರಿಕೆ ಕಂಪನಿಯಾದ ರುಚಿ ಸೋಯಾ ಇಂಡ್ಸ್‍ಸ್ಟ್ರೀಸ್ಸ್ ಅವರೊಂದಿಗೆ ಪಿಪಿಪಿ ಮಾದರಿಯಲ್ಲಿ ಅನುμÁ್ಠನಗೊಳಿಸಲಾಗುತ್ತಿದ್ದು, ತಾಳೆ ಹೊಸ ಪ್ರದೇಶ ವಿಸ್ತರಣೆಗೆ ರೂ.20 ಸಾವಿರ ಸಹಾಯಧನ ಹಾಗೂ ಮೊದಲ ನಾಲ್ಕು ವರ್ಷದ ಪಾಲನೆಗಾಗಿ 5500 ರಂತೆ ಪ್ರತಿ ಹೇಕ್ಟರ್‍ಗೆ ನೀಡಲಾಗುವುದು. ಇದರ ಜೊತೆಗೆ ತಾಳೆಯಲ್ಲಿ ಡಿಸೇಲ್ ಪಂಪ್ ಸೆಟ್ ಖರೀದಿಗೆ, ಕಟಾವು ಯಂತ್ರ ಖರೀದಿಗೆ ಹಾಗೂ ಅಂತರ ಬೇಸಾಯ ಕೈಗೊಂಡಿದ್ದಲ್ಲಿ ಹೆಕ್ಟೇರ್‍ಗೆ ರೂ.5 ಸಾವಿರ ಸಹಾಯಧನ ನೀಡಲಾಗುತ್ತದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಉಪ ಯೋಜನೆಯಡಿಯಲ್ಲಿ ಪ್ರದೇಶ ವಿಸ್ತರಣೆ, ಕಿತ್ತಳೆ ಮತ್ತು ಕಾಳು ಮೆಣಸು ಪುನಶ್ಚೇತನ ಕಾರ್ಯಕ್ರಮ, ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಹಾಗೂ ಪ್ರಾಥಮಿಕ ಸಂಸ್ಕರಣ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು. ಎಸ್‍ಎಂಎಎಂ ಯಾಂತ್ರೀಕರಣ ಯೋಜನೆಯಡಿ ಇಲಾಖಾ ಮಾರ್ಗಸೂಚಿಯಂತೆ ಅನುಮೋದಿತ ಸಂಸ್ಥೆಯಿಂದ ಖರೀದಿಸಿದ ಮರ ಕತ್ತರಿಸುವ ಯಂತ್ರ, ಪವರ್ ಸ್ಟೇಯರ್, ಕಳೆಕೊಚ್ಚುವ ಯಂತ್ರ, ಏಣಿ, ತಳ್ಳುವ ಗಾಡಿ ಮುಂತಾದ ಯಂತ್ರೋಪಕರಣಗಳಿಗೆ ಶೇ.40/50 ರ ಸಹಾಯಧನ ನೀಡಲಾಗುತ್ತದೆ.
ಇಚ್ಚಿಸುವ ರೈತರು ನಿಗಧಿತ ಅರ್ಜಿ ನಮೂನೆ, ಆರ್‍ಟಿಸಿ, ಆಧಾರ್ ಕಾರ್ಡ್ ಹಾಗೂ ಇತರೆ ದಾಖಲಾತಿಗಳೊಂದಿಗೆ ಸಮೀಪದ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕಚೇರಿಯಲ್ಲಿ ಸೆಪ್ಟೆಂಬರ್, 05 ರೊಳಗೆ ಹೆಸರು ನೋಂದಾಯಿಸಿಕೊಳ್ಳಲು ಕೋರಿದೆ ಹಾಗೂ ಸಹಾಯಧನವನ್ನು ನಿಗಧಿಪಡಿಸಿದ ಗುರಿಗೆ ಅನುಗುಣವಾಗಿ ಜೇಷ್ಠತಾ ಪಟ್ಟಿ ಆಧಾರದ ಮೇಲೆ ನೀಡಲಾಗುವುದು ಹಾಗೂ ಸರ್ಕಾರದ ನಿಯಮಾನುಸಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಅಲ್ಪಸಂಖ್ಯಾತರು, ಮಹಿಳೆಯರು, ಅಂಗವಿಕಲರಿಗೆ ಆದ್ಯತೆಯನ್ನು ನೀಡಲಾಗುವುದು ಎಂದು ತೋಟಗಾರಿಕೆ ಉಪ ನಿರ್ದೇಶಕರಾದ ಪ್ರಮೋದ್ ತಿಳಿಸಿದ್ದಾರೆ.
Breaking News
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*