ಸೋಮವಾರಪೇಟೆ ಆ.23 : ಸೋಮವಾರಪೇಟೆ ಕ್ಷೇತ್ರಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಇದೀಗ ಮೈಸೂರು ಡಯಾಟ್‍ಗೆ ವರ್ಗಾವಣೆಗೊಂಡಿರುವ ಕೆ.ವಿ.ಸುರೇಶ್ ಅವರನ್ನು ತಾಲ್ಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಕಾಜೂರು ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಸಂಘದ ಪ್ರಮುಖರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.
ಸಂಘದ ತಾಲ್ಲೂಕು ಅಧ್ಯಕ್ಷ ರತ್ನಕುಮಾರ್, ಕಾರ್ಯದರ್ಶಿ ಶಿಲ್ಪಾ, ಯಶವಂತ್ ಕುಮಾರ್ ಇದ್ದರು.








