ಬೆಂಗಳೂರು ಆ.23 : ವಿಕ್ರಮ್ ಲ್ಯಾಂಡರ್ ಇಂದು ಸಂಜೆ ಸುಮಾರು 6.04 ಕ್ಕೆ ಚಂದ್ರನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮೂರನೇ ಚಂದ್ರಯಾನ-3 ಯಶಸ್ವಿಯಾಗಿದೆ. ಜುಲೈ 14ರಂದು ಉಡಾವಣೆಗೊಂಡಿದ್ದ ಚಂದ್ರಯಾನ 3 ಇಂದು ಸಂಜೆ 6.04ಕ್ಕೆ ಸರಿಯಾಗಿ ಚಂದ್ರನ ಮೇಲ್ಮೈ ಮೇಲೆ ಸಾಫ್ಟ್ ಲ್ಯಾಂಡ್ ಆಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಅನ್ನು ಸುಸೂತ್ರವಾಗಿ ಇಳಿಸಿದ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ. ಚಂದ್ರಯಾನ-3ರ ಲ್ಯಾಂಡರ್‌ನ ಸಾಫ್ಟ್ ಲ್ಯಾಂಡಿಂಗ್‌ಗೆ 15 ರಿಂದ 17 ನಿಮಿಷಗಳನ್ನು ತೆಗೆದುಕೊಂಡಿತು. ಚಂದ್ರಯಾನ 3 ಅನ್ನು 14 ಜುಲೈ 2023ರಂದು ಮಧ್ಯಾಹ್ನ 2.30 ಕ್ಕೆ ಉಡಾವಣೆ ಮಾಡಲಾಗಿತ್ತು.









