ಮಡಿಕೇರಿ ಆ.24 : ದುಬಾರೆ ಮತ್ತು ಹಾರಂಗಿಯ ಸಾಕಾನೆ ಶಿಬಿರಕ್ಕೆ ಆನೆ ಯೋಜನೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶಾಶ್ವತಿ ಮಿಶ್ರ ಭೇಟಿ ನೀಡಿದರು.
ಆನೆ ಮಾವುತರು ಕಾವಡಿಗಳ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಸಾಕಾನೆ ಶಿಬಿರಗಳ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ರೂಪಿಸುವುದರೊಂದಿಗೆ ಕಾಡಾನೆಗಳ ದಾಳಿ ತಪ್ಪಿಸಲು ಶಾಶ್ವತ ಕ್ರಿಯಾಯೋಜನೆ ರೂಪಿಸುವುದಾಗಿ ಅವರು ಹೇಳಿದರು. ಇಲಾಖೆ ಮೂಲಕ ಹೆಚ್ಚಿನ ಅನುದಾನ ಕಲ್ಪಿಸುವುದಾಗಿ ಅವರು ಭರವಸೆ ನೀಡಿದರು.
ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಎ.ಟಿ.ಪೂವಯ್ಯ, ಸೋಮವಾರಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಎ.ಗೋಪಾಲ, ಕುಶಾಲನಗರ ವಲಯದಲ್ಲಿ ಅರಣ್ಯ ಅಧಿಕಾರಿ ಕೆ.ವಿ.ಶಿವರಾಮ್, ಉಪ ವಲಯ ಅರಣ್ಯ ಅಧಿಕಾರಿ ಅನಿಲ್ ಡಿಸೋಜ, ಕನ್ನಂಡ ರಂಜನ್ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.