ಮಡಿಕೇರಿ ಆ.24 : ಕೊಡಗು ಜಿಲ್ಲೆಯಲ್ಲಿ 2023ನೇ ಸಾಲಿನಲ್ಲಿ ನಾವಿನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ಮಕ್ಕಳನ್ನು ಪ್ರೋತ್ಸಾಹಿಸಲು ಪ್ರಶಸ್ತಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಾವೀನ್ಯತೆ ಕ್ಷೇತ್ರ-2, ತಾರ್ಕಿಕ ಸಾಧನೆಗಳು-2, ಕ್ರೀಡೆ-2, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ-2 ಈ 4 ವಿಭಾಗದಲ್ಲಿ ತಲಾ 2 ರಂತೆ ಒಟ್ಟು 8 ಪ್ರಶಸ್ತಿಗಳನ್ನು ನೀಡಲಾಗುವುದು. ಅಸಾಧಾರಣ ಸಾಧನೆ ಮಾಡಿ ಪ್ರತಿಭೆ ತೋರಿರುವ 5 ರಿಂದ 18 ವರ್ಷದೊಳಗಿನ (ಜುಲೈ 31 ಕ್ಕೆ) ಮಕ್ಕಳನ್ನು 2023-24ನೇ ಸಾಲಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಈ ಜಿಲ್ಲಾ ಮಟ್ಟದ ಪ್ರಶಸ್ತಿಯು ಪ್ರಶಸ್ತಿ ಪತ್ರ ಹಾಗೂ ರೂ.10 ಸಾವಿರ ನಗದು ಬಹುಮಾನ ಒಳಗೊಂಡಿದೆ.
ಈ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, 4 ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ಅಸಾಧಾರಣವೆಂದು ಗುರುತಿಸಲು ಅವರ ಸಾಧನೆಯ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು ಅಥವಾ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪರೀಕ್ಷಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಈ ಹಿಂದೆ ಯಾವುದಾದರೂ ವರ್ಷದಲ್ಲಿ ಅರ್ಜಿ ಪ್ರಶಸ್ತಿಗೆ ಪರಿಗಣಿಸಲ್ಪಟ್ಟಿದ್ದಲ್ಲಿ, ಪುನಃ ಅದನ್ನು ಪರಿಗಣಿಸಲಾಗುವುದಿಲ್ಲ.
2023-24ನೇ ಸಾಲಿನ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಇಲ್ಲಿಂದ ಪಡೆದು ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳೊಂದಿಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪ್ರಸ್ತಾವನೆಯನ್ನು ಅಕ್ಟೋಬರ್, 30 ರೊಳಗೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸತಕ್ಕದ್ದು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9482194105, 9535626053 ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ ತಿಳಿಸಿದ್ದಾರೆ.
Breaking News
- *ಕೊಡಗು ಪತ್ರಿಕಾ ಭವನ ಟ್ರಸ್ಟ್ ನಿಂದ ಗಣರಾಜ್ಯೋತ್ಸವ ಆಚರಣೆ*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಗೌರವಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಗಣತಂತ್ರ ಹಬ್ಬದ ಮೂಲಕ ನಮ್ಮ ದೇಶದ ಸಾಂವಿಧಾನಿಕ ಅನನ್ಯತೆಯನ್ನು ಸಾರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನದ ಆಶಯಗಳಿಗೆ ಬದ್ಧರಾಗಿರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*