ಸೋಮವಾರಪೇಟೆ ಆ.25 : ದೇಶದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ಹಿನ್ನೆಲೆಯಲ್ಲಿ ಲಯನ್ಸ್ ಸಂಸ್ಥೆಯ ವತಿಯಿಂದ ಜೇಸಿ ವೇದಿಕೆಯಲ್ಲಿ ಸಂಭ್ರಮಾಚರಣೆ ನಡೆಯಿತು.
ಕಾರ್ಯಕ್ರಮದಲ್ಲಿ ತಶೀಲ್ದಾರ್ ಎಸ್.ಎನ್.ನರಗುಂದ ಪಾಲ್ಗೊಂಡು ಮಾತನಾಡಿ, ಎಲ್‍ಎಂವಿ-3 ರಾಕೇಟ್‍ನಲ್ಲಿ ಉಡಾವಣೆಯಾದ ಚಂದ್ರಯಾನ-3 ಗಗನನೌಕೆ 40ದಿನಗಳ ಯಾನದ ಬಳಿಕ ಚಂದ್ರನಂಗಳಕ್ಕೆ ಇಳಿದಿದ್ದು, ಇದರ ಶ್ರೇಯಸ್ಸು ಇಸ್ರೋದ ವಿಜ್ಞಾನಿಗಳಿಗೆ ಸಲ್ಲಬೇಕು ಎಂದು ಶ್ಲಾಘೀಸಿದರು.
ಲಯನ್ಸ್ ಸಂಸ್ಥೆಯ ಅಧ್ಯಕ್ಷ ಎ.ಎಸ್.ಮಹೇಶ್ ಮಾತನಾಡಿ, ಚಂದ್ರಯಾನದ ಯಶಸ್ಸಿನಿಂದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವ ಹೆಚ್ಚಾಗಿದೆ. ಇಸ್ರೋದ ಮುಂದಿನ ಯೋಜನೆಗಳು ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಲಿ ಎಂದು ಹಾರೈಸಿದರು.
ಈ ಸಂದರ್ಭ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳಾದ ರೋಹಿತ್, ಲೀಲಾರಾಂ, ಸಿ.ಕೆ. ಮಲ್ಲಪ್ಪ, ಸಿ.ಕೆ.ಶಿವಕುಮಾರ್, ನಿರ್ವಾಣಿ ಶೆಟ್ಟಿ, ಲಿಯೋ ಕ್ಲಬ್ ಅಧ್ಯಕ್ಷೆ ಪ್ರತೀಕ್ಷಾ, ವಿಶ್ವಮಾನವ ಕುವೆಂಪು ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ವೈ.ಎಸ್. ಧನ್ಯ ಸೇರಿದಂತೆ ಮತ್ತಿತರರು ಇದ್ದರು.
Breaking News
- *ಕೊಡಗು ಪತ್ರಿಕಾ ಭವನ ಟ್ರಸ್ಟ್ ನಿಂದ ಗಣರಾಜ್ಯೋತ್ಸವ ಆಚರಣೆ*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಗೌರವಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಗಣತಂತ್ರ ಹಬ್ಬದ ಮೂಲಕ ನಮ್ಮ ದೇಶದ ಸಾಂವಿಧಾನಿಕ ಅನನ್ಯತೆಯನ್ನು ಸಾರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನದ ಆಶಯಗಳಿಗೆ ಬದ್ಧರಾಗಿರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*