ಮಡಿಕೇರಿ ಆ.25 : ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾಪೇಟೆ ತಾಲ್ಲೂಕಿನ ಅಡಿಯನಾಡೂರು ಗ್ರಾಮದಲ್ಲಿ ನಡೆದಿದೆ.
ಈರಪ್ಪ(60) ಮೃತ ದುರ್ದೈವಿ. ಮುಂಜಾನೆ ಹಸುವನ್ನು ಹುಡುಕಿಕೊಂಡು ಹೋಗುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.






