ಮಡಿಕೇರಿ ಆ.25 : ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ಜನ ಔಷಧ ಕೇಂದ್ರಕ್ಕೆ ಶಾಸಕ ಎ.ಎಸ್ ಪೊನ್ನಣ್ಣ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಜನ ಔಷಧ ಅಂಗಡಿಯಲ್ಲಿ ಇತರೆ ಔಷಧಿಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕರು ಭೇಟಿ ನೀಡಿ, ಅಲ್ಲಿರುವ ಅವ್ಯವಸ್ಥೆ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.