ಮಡಿಕೇರಿ ಆ.25 : ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಗೆ ಇಬ್ಬರು ತುತ್ತಾಗಿದ್ದು, ನೋವು ತಂದಿದೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.
ಕಾಡು ಪ್ರಾಣಿಗಳ ಹಾವಳಿ ತಡೆಯಬೇಕಿದ್ದು, ಆ ನಿಟ್ಟಿನಲ್ಲಿ ಆ.26 ರಂದು ಅರಣ್ಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದರು.
ಕಾಡಾನೆ ಹಾವಳಿಗೆ ತುತ್ತಾದ ಕುಟುಂಬದವರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಸಭೆ ನಡೆಸಲಿದ್ದಾರೆ. ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಸಹ ಆಗಮಿಸಲಿದ್ದಾರೆ ಎಂದು ಎ.ಎಸ್.ಪೊನ್ನಣ್ಣ ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷವನ್ನು ತಡೆಯುವ ನಿಟ್ಟಿನಲ್ಲಿ ಅರಣ್ಯ ಸಚಿವರ ಗಮನಕ್ಕೆ ತಂದಾಗ ಆ.26 ರಂದು ಅರಣ್ಯ ಸಚಿವರು ಭೇಟಿ ನೀಡುತ್ತಿದ್ದು, ಮಾನವ ಮತ್ತು ವನ್ಯ ಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಲಾಗುತ್ತದೆ ಎಂದರು.







