ಮಡಿಕೇರಿ ಆ.26 : ತಿತಿಮತಿಯ ಚೈನಿಹಡ್ಲು, ಬಂಬುಕಾಡು ಹಾಡಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿದರು.
ಹಾಡಿ ನಿವಾಸಿಗಳೊಂದಿಗೆ ಚರ್ಚಿಸಿ, ಅಹವಾಲು ಸ್ವೀಕರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 200 ಕಾಡಾನೆಗಳನ್ನು ಕೂಡಲೇ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಲು ಸೂಚನೆ ನೀಡಲಾಗಿದ್ದು, ಮಾನವ ಜೀವಹಾನಿ ಹಾಗೂ ಜನವಸತಿ ಪ್ರದೇಶಗಳಿಗೆ ಲಗ್ಗೆ ಇಡುತ್ತಿರುವ ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ, ಕಾಡಾನೆ ಸಮಸ್ಯೆಗಳಿರುವ ಪ್ರದೇಶಗಳಲ್ಲಿ 5 ಕಿ.ಮೀ.ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಆದೇಶ ನೀಡಲಾಗಿದೆ ಎಂದರು.
ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.