ಮಡಿಕೇರಿ ಆ.26 : ಕಾಡಾನೆ ದಾಳಿಯಿಂದ ಮೃತಪಟ್ಟ ಸಿದ್ಧಾಪುರ ಬಳಿಯ ಬಾಡಗ-ಬಾನಂಗಾಲ ಗ್ರಾಮದ ನಿವಾಸಿ ಆಯಿಷ (63) ಅವರ ಮನೆಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿದರು.
ನಂತರ ಆಯಿಷ ಅವರ ಪುತ್ರ ಲತೀಫ್ ಅವರಿಗೆ ಸಾಂತ್ವನ ಹೇಳಿ, 5 ಲಕ್ಷ ರೂಪಾಯಿ ಮೊತ್ತದ ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ , ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಮತ್ತು ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.