ವಿರಾಜಪೇಟೆ ಆ.26 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ಬಿ.ಸಿ ಟ್ರಸ್ಟ್ ಹಾಗೂ ಮಹಿಳಾ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ದೇವಣಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಮಹಿಳಾ ಸ್ವ ಉದ್ಯೋಗ ಪ್ರೇರಣಾ ಶಿಬಿರ ನಡೆಯುತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ)ಬಿ.ಸಿ ಟ್ರಸ್ಟ್ ಕೊಡಗು ಜಿಲ್ಲಾ ನಿರ್ದೇಶಕರಾದ ಲೀಲಾವತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳಾ ಸ್ವಾವಲಂಬನೆ ಇಂದಿನ ಅನಿವಾರ್ಯತೆಯಾಗಿದೆ. ಮಹಿಳೆಯರು ತನ್ನ ಗಂಡ ಹಾಗೂ ಮಕ್ಕಳ ದುಡಿಮೆಯನ್ನು ನೆಚ್ಚಿಕೊಂಡು ಬದುಕು ಸಾಗಿಸುವ ಕಾಲ ಕಳೆದು ಹೋಗುತ್ತಿದೆ. ವಿವಿಧ ಕೌಶಲ್ಯಗಳನ್ನು ತನ್ನಲ್ಲಿ ಮೈಗೂಡಿಸಿಕೊಂಡು ಸ್ವಾಸ್ತ್ಯ ಸಮಾಜದಲ್ಲಿ ತನ್ನದೇ ಛಾಪು ಮೂಡಿಸುವಲ್ಲಿ ಪ್ರತಿಯೊರ್ವ ಮಹಿಳೆಯರು ಯಶಸ್ವಿಯಾಗುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿವಿಧ ಸ್ವ ಉದ್ಯೋಗಗಳ ಬಗೆಗಿನ ಮಾಹಿತಿಯನ್ನು ಜಿಲ್ಲಾ ತರಬೇತಿ ಕೇಂದ್ರ ಕೂಡಿಗೆಯ ನಿರ್ದೇಶಕರಾದ ಪ್ರಕಾಶ್ ಸಾಬೂನು ತಯಾರಿಕೆ, ಕ್ಯಾಂಡಲ್ ತಯಾರಿಕೆ, ಹೊಲಿಗೆ ತರಬೇತಿ ಬಗ್ಗೆ ಪ್ರಾತ್ಯಕ್ಷಿಕಾ ತರಬೇತಿಗಳ ಬಗ್ಗೆ ಸವಿವರವಾಗಿ ತಿಳಿಸಿ ಸದಸ್ಯರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ದೇವಣಗೇರಿ ಪ್ರಾರ್ಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಸರಸು ಕಾರ್ಯಕ್ರಮಕ್ಕೆ ಶುಭ ಕೋರಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ದಿನೇಶ್ ಬಿ. ಉಪಸ್ಥಿತರಿದ್ದರು.
ಜ್ಞಾನವಿಕಾಸ ಕೇಂದ್ರದ ಸುಮಾ ಅಧ್ಯಕ್ಷತೆ ವಹಿಸಿದ್ದರು. ಜ್ಞಾನವಿಕಾಸ ಸಮನ್ವಯ ಅಧಿಕಾರಿ ಕುಮಾರಿ ಶ್ರೇಯ, ಅಮ್ಮತ್ತಿ ವಲಯದ ಮೇಲ್ವಿಚಾರಕರಾದ ಸುಜೀರ್, ಚೆಂಬೆಬೆಳ್ಳೂರು ಕಾರ್ಯಕ್ಷೇತ್ರದ ಸೇವ ಪ್ರತಿನಿಧಿ ದೇವಕಿ, ಚೆಂಬೆಬೆಳ್ಳೂರು ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಆರಾಧನ ಕೇಂದ್ರದ ಸದಸ್ಯರು ಹಾಜರಿದ್ದರು.