ಮಡಿಕೇರಿ ಆ.29 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ವತಿಯಿಂದ ನಗರದ ಕೊಡಗು ವಿದ್ಯಾಲಯ ಶಾಲೆಯಲ್ಲಿ ಆಜಾದಿಕ ಅಮೃತ ಮಹೋತ್ಸವದ ಅಂಗವಾಗಿ “ಮೇರಾ ಮಾಟಿ ಮೇರ ದೇಶ್” ಎಂಬ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯ ಆದೇಶದಂತೆ ಎಲ್ಲಾ ಜಿಲ್ಲೆಗಳಿಂದ ಹಾಗೂ ಸ್ಥಳೀಯ ಸಂಸ್ಥೆಗಳಿಂದ ಮಣ್ಣನ್ನು ಪೂಜಿಸಿ ಕಳಸಕ್ಕೆ ತುಂಬಿಸಿ ಜಿಲ್ಲಾ ಸಂಸ್ಥೆಗೆ ಕಳುಹಿಸಿಕೊಡಲಾಯಿತು.
ಕಾರ್ಯಕ್ರಮದಲ್ಲಿ ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ನಂದಿನೆರವಂಡ ಸುಮಿತ್ರ, ಶಾಲಾ ಆಡಳಿತ ಮುಖ್ಯಸ್ಥ ರವಿ, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ, ಜಿಲ್ಲಾ ಸಂಘಟಕರಾದ ಯು.ಸಿ. ದಮಯಂತಿ, ಮಡಿಕೇರಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಅಜ್ಜಮಕ್ಕಡ ವಿನುಕುಮಾರ್, ಸ್ಕೌಟ್ ಮಾಸ್ಟರ್ ಕುಟ್ಟಪ್ಪ, ಗೈಡ್ ಕ್ಯಾಪ್ಟನ್ ಬಿಂದು, ಗೈಡ್ ಕ್ಯಾಪ್ಟನ್ ಗಾಯನ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.