ಮಡಿಕೇರಿ ಆ.26 : ಬ್ರಹ್ಮಕುಮಾರೀಸ್ ಸಂಸ್ಥೆಯ ಪೂರ್ವ ಆಡಳಿತ ಅಧಿಕಾರಿ ದಾದಿ ಪ್ರಕಾಶಮಣಿ ಅವರ 16ನೇ ಪುಣ್ಯ ಸ್ಮೃತಿಯ ಪ್ರಯುಕ್ತ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಚೆ ಚೀಟಿ ಬಿಡುಗಡೆ ಮಾಡಿದರು.
ದಾದಿಜೀ ಅವರು, 47 ವರ್ಷಗಳ ಕಾಲ ಬ್ರಹ್ಮಕುಮಾರಿ ಸಂಸ್ಥೆಯ ಆಡಳಿತ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. 15ನೇ ವಯಸ್ಸಿಗೆ ತಮ್ಮನ್ನು ಸಮರ್ಪಿಸಿಕೊಂಡ ದಾದಿಜೀ ವಿಶ್ವದಾದ್ಯಂತ ಸಂಚರಿಸಿ ಕೋಟ್ಯಾಂತರ ಜನರಿಗೆ ಆಧ್ಯಾತ್ಮ ಮಾರ್ಗದ ಪ್ರೇರಣೆ ನೀಡಿದರು. ಸಂಸ್ಥೆಯನ್ನು ವಿಶ್ವಮಟ್ಟದಲ್ಲಿ ಬೆಳೆಸಿ ವಿಶ್ವ ಮಾತೆಯಾದರು.
1980 ರಲ್ಲಿ ಕೊಡಗಿಗೆ ಭೇಟಿ ನೀಡಿ ಇಲ್ಲಿಯ ಜನತೆಗೂ ಆಧ್ಯಾತ್ಮ ಪ್ರೇರಣೆ ನೀಡಿದರು. ಅಂದಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅರವರೊಂದಿಗೆ ಕೊನೆಯವರೆಗೂ ಉತ್ತಮ ಒಡನಾಟವಿದ್ದು, ಅವರಿಗೆ ರಾಜಯೋಗದ ಅನುಭೂತಿ ಮಾಡಿಸಿ ಅಂದು ನಡೆದ ವಿಶ್ವಶಾಂತಿಯ ಸಮ್ಮೇಳನದ ಉದ್ಘಾಟಕರಾಗಿ ಕಾರ್ಯಪ್ಪ ಅವರು ಭಾಗವಹಿಸಿದ್ದರು.
ಇಂದು ಅವರ ಪುಣ್ಯ ಸ್ಮರಣೆಯನ್ನು ಲೈಟ್ ಹೌಸ್ ಸಭಾಂಗಣದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು ಜಿಲ್ಲೆಯ ಎಲ್ಲಾ ಸೇವಾಕೇಂದ್ರಗಳಲ್ಲಿ ವಿಶೇಷ ಧ್ಯಾನದ ಕಾರ್ಯಕ್ರಮ ಆಯೋಜಿಸಲಾಗಿತ್ತು.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*