ಮಡಿಕೇರಿ ಆ.27 : ದೈವಾರಾಧನೆಯಲ್ಲಿ ಲೋಪವಾಗದಂತೆ ಎಲ್ಲರೂ ಎಚ್ಚರ ವಹಿಸಬೇಕು ಮತ್ತು ದೈವಗಳ ಭಾವಚಿತ್ರಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಅಭಿಪ್ರಾಯಗಳನ್ನು ಹರಿಯ ಬಿಡಬಾರದು ಎಂದು ಪ್ರಸಿದ್ಧ ದೈವ ನರ್ತಕ ಸುಳ್ಯದ ಬೊಳಿಮಜಲಿನ ಜಯರಾಮ್ ತಿಳಿಸಿದ್ದಾರೆ.
ಮಡಿಕೇರಿಯ ಬಾಲಭವನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ದೈವ ಆರಾಧಕರು ಹಾಗೂ ದೈವ ನರ್ತಕರ ಸಂಘದ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಮೊಬೈಲ್ ನಲ್ಲಿ ದೈವದ ಫೋಟೋ ತೆಗೆದು ಕಮೆಂಟ್ ಮಾಡುವುದರಿಂದ ದೈವಕ್ಕೆ ಅಪಚಾರ ಮಾಡಿದಂತಾಗುತ್ತದೆ. ಇದರಿಂದ ತಲೆಮಾರಿನವರೆಗೂ ದೋಷ ಕಾಡಬಹುದು ಎಂದು ಎಚ್ಚರಿಕೆ ನೀಡಿದರು.
ದೈವಾರಾಧನೆಯು ಆಯಾ ಪ್ರದೇಶಕ್ಕೆ ತಕ್ಕಂತೆ ವಿಭಿನ್ನ ರೀತಿಯಲ್ಲಿ ನಡೆಯುತ್ತದೆ. ತುಳುನಾಡಿನಲ್ಲಿ ದೈವ ನರ್ತನ ಎರಡೂವರೆ ಗಂಟೆ ನಡೆದರೆ ಕೊಡಗಿನಲ್ಲಿ ಪ್ರಶ್ನೆ ಚಿಂತನೆಯ ಕ್ರಮ ಸೇರಿ ರಾತ್ರಿ ಪೂರ್ತಿ ನಡೆಯುತ್ತದೆ. ಸಂಪ್ರದಾಯಕ್ಕೆ ಲೋಪವಾಗದಂತೆ ಪ್ರತಿಯೊಬ್ಬರು ಎಚ್ಚರ ವಹಿಸಬೇಕು. ದೈವದ ಆರಾಧನೆ ನಿರ್ಧರಿಸುವ ಬಡ ವರ್ಗದವರಿಗೆ ಆರ್ಥಿಕ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಸಂಘಟನೆ ಮೂಲಕ ದರ ನಿಗದಿ ಮಾಡುವ ಕಾರ್ಯ ಆಗಬೇಕು. ಹಿರಿಯರು ಹೇಳಿಕೊಟ್ಟ ನಿಯಮಗಳನ್ನೇ ಆದಷ್ಟು ಅನುಸರಿಸಬೇಕು ಎಂದು ಸಲಹೆ ನೀಡಿದರು.
ಸಂಘದ ಹಿರಿಯ ಸಲಹೆಗಾರ ಕೆ.ಕೆ.ದೇವಪ್ಪ ಮಾತನಾಡಿ ತುಳುನಾಡು, ಕೊಡಗು ಸೇರಿದಂತೆ ಅನೇಕ ಭಾಗದಲ್ಲಿ ದೈವರಾಧನೆ ನಡೆಯುತ್ತಿದ್ದು, ಧಾರ್ಮಿಕ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
ಪ್ರತಿವರ್ಷ ನಡೆಯುವ ದೈವಾರಾಧನೆ ಯಾವುದೇ ಕಾರಣಕ್ಕು ನಿಲ್ಲಬಾರದು. ನೇಮೋತ್ಸವ ನಡೆಯದೇ ಇರುವ ಕಡೆ ಮತ್ತೆ ಮುಂದುವರಿಸುವ ಕುರಿತು ಅರಿವು ಮೂಡಿಸಬೇಕು ಮತ್ತು ಸಂಘದಿoದ ಸಹಕಾರ ನೀಡಬೇಕು ಎಂದು ತಿಳಿಸಿದರು.
ದೈವ ಆರಾಧಕರ ಹಾಗೂ ದೈವ ನರ್ತಕರ ಸಂಘದ ಸ್ಥಾಪಕ ಅಧ್ಯಕ್ಷ ಪಿ.ಎಂ.ರವಿ ಮಾತನಾಡಿ ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ದೈವಸ್ಥಾನಗಳಿದ್ದು, ಕೊಡಗು ಜಿಲ್ಲೆಗೂ ತುಳುನಾಡಿಗೂ ಅವಿನಾಭಾವ ಸಂಬoಧವಿದೆ. ದೈವದ ಬಗ್ಗೆ ಅಪಪ್ರಚಾರ, ಅಪಹಾಸ್ಯ ಮಾಡುವುದನ್ನು ಸಂಘಟನೆ ಸಹಿಸುವುದಿಲ್ಲ. ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಾಲಾ, ಕಾಲೇಜು ಸೇರಿದಂತೆ ಸಾರ್ವಜನಿಕ ಸಮಾರಂಭಗಳಲ್ಲಿ ದೈವದ ವೇಷಭೂಷಣ ತೊಟ್ಟು ಕಾರ್ಯಕ್ರಮ ನೀಡಿದರೆ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಹೇಳಿದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಸದಾಶಿವ ರೈ ಸಂಘವು ನೋಂದಾವಣೆಗೊoಡಿದ್ದು, ಜಿಲ್ಲೆಯ ಎಲ್ಲಾ ದೈವ ಆರಾಧಕರು ಹಾಗೂ ದೈವ ದೈವ ನರ್ತಕರು ಸದಸ್ಯತ್ವ ಪಡೆದುಕೊಳ್ಳಬೇಕು. ಸಂಘದ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಸಂಘಟನಾ ಕಾರ್ಯದರ್ಶಿ ರಮೇಶ್, ಜಿಲ್ಲಾ ಖಜಾಂಚಿ ಜನಾರ್ಧನ್, ಪದಾಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಭಾಗದ ಸದಸ್ಯರು ಉಪಸ್ಥಿತರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*