ಮಡಿಕೇರಿ ಆ.27 : ಹುಲಿ ದಾಳಿಗೆ ಸಿಲುಕಿ ಕರುವೊಂದು ಸಾವನ್ನಪ್ಪಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಹೋಬಳಿಯ ಕೋತೂರು ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಗಣೇಶ್ ಎಂಬುವವರಿಗೆ ಸೇರಿದ ಕರು ಇದಾಗಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ಮೂಡಿದೆ. ಸ್ಥಳಕ್ಕೆ ನಾಗರಹೊಳೆ ವಲಯ ಅರಣ್ಯ ಅಧಿಕಾರಿಗಳು ಹಾಗೂ ಪೊನ್ನಂಪೇಟೆ ವಲಯ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಲಿ ಚಲನವಲನದ ಮೇಲೆ ನಿಗಾ ವಹಿಸಲು ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.








