ಮಡಿಕೇರಿ ಆ.28 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ ಆ.29 ರಂದು
ದಿ. ಶಾಂತಮಲ್ಲಸ್ವಾಮಿ ದತ್ತಿ ಮತ್ತು ದಿ.ಕೆ.ಟಿ ಸುಬ್ಬರಾವ್ ದತ್ತಿ ಉಪನ್ಯಾಸ ಹಾಗೂ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.
ಚೇರಂಬಾಣೆಯ ಕೊಟ್ಟೂರು ಗ್ರಾಮದ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಶ್ರೀ ರಾಜರಾಜೇಶ್ವರಿ ಎಜುಕೇಶನ್ ಟ್ರಸ್ಟಿನ ಕಾರ್ಯದರ್ಶಿ ಹಾಗೂ ವ್ಯವಸ್ಥಾಪಕರಾದ ನಾಟೋಳoಡ. ಡಿ. ವಿಜು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದು, ಕೊಡಗಿನ ವೀರಶೈವ ಅರಸರ ಕುರಿತು ಉಪನ್ಯಾಸವನ್ನು ಶಿಕ್ಷಕರಾದ ಕೆ.ಬಿ ಉಷಾರಾಣಿ ಮತ್ತು ಕನ್ನಡ ಸಾಹಿತ್ಯದಲ್ಲಿ ಕೊಡಗು ಕುರಿತು ಉಪನ್ಯಾಸವನ್ನು ಭಾಗಮಂಡಲದ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ವಿ.ವಿ ಶಿವಪ್ಪ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೆಂಗೂರು ಗ್ರಾ.ಪಂ ಅಧ್ಯಕ್ಷರಾದ ಪಟ್ಟಮಾಡ ಮಿಲನ್ ಮುತ್ತಣ್ಣ, ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೆ.ಎಸ್. ಕವನ್ ಕುಮಾರ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುನಿಲ್ ಪತ್ರಾವೊ, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಎ.ಎಸ್.ಶ್ರೀಧರ್ ಭಾಗವಹಿಸಲಿದ್ದಾರೆ.
ಚೇರಂಬಾಣೆಯ ಸಾಹಿತಿಗಳಾದ ಕು. ಚೀರಮ್ಮನ ವಾಣಿ ಚೆಂಗುವಮಯ್ಯ ” ತಾಳ್ಮೆಯ ಚಿಗುರು” ಕವನ ಸಂಕಲನವು ಬಿಡುಗಡೆಗೊಳಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.