ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೋಮವಾರ 51,000ಕ್ಕೂ ಹೆಚ್ಚು ಜನರಿಗೆ ರೋಜ್ಗಾರ್ ಮೇಳದಡಿಯಲ್ಲಿ (Rozgar Mela) ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಿದ್ದಾರೆ.
ದೆಹಲಿಯಿಂದ ವರ್ಚುವಲ್ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳದ 8ನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅರೆಸೇನಾ ಪಡೆಗಳಲ್ಲಿನ ನೇಮಕಾತಿ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದ್ದು, ನೇಮಕಾತಿಯ ಸಮಯವನ್ನು ಕಡಿಮೆಗೊಳಿಸಲಾಗಿದೆ ಎಂದು ಅವರು ಹೇಳಿದರು.