ಮಡಿಕೇರಿ ಆ.28 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ನಾ.ಡಿಸೋಜಾ ಹೆಸರಿನಲ್ಲಿ ಸ್ಥಾಪಿತವಾಗಿರುವ ನಾ. ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿನಿಧಿಯಂತೆ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕಥೆ ಬರೆಯುವ ಸ್ಪರ್ಧೆ ಮತ್ತು ಕತೆ ರಚನಾ ವಿಧಾನದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಮಡಿಕೇರಿಯ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಉಪ ನಿರ್ದೇಶಕ ಪುಟ್ಟರಾಜು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತು ವಿದ್ಯಾರ್ಥಿಗಳಿಗೆ ಕಥೆ ಬರೆಯಲು ವೇದಿಕೆ ಹಾಗೂ ಪ್ರೋತ್ಸಾಹ ನೀಡುತ್ತಿದೆ. ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ಮುಂದೆ ಉತ್ತಮ ಕಥೆಗಾರರು, ಸಾಹಿತಿಗಳು ಆಗಬೇಕೆಂದು ಕಿವಿಮಾತು ಹೇಳಿದರು.
ಸಾಹಿತಿ, ಬರಹಗಾರ್ತಿ ಸುನೀತಾ ಕತೆ ರಚನೆ ಕುರಿತು ಉಪನ್ಯಾಸ ನೀಡಿ, ಕಥೆ ಬರೆಯಬೇಕೆಂದರೆ ಮೊದಲು ಮೂಲ ಹಾಗೂ ಅನುವಾದಿತ ಕಥೆ ಗಳನ್ನು ಓದಿಕೊಳ್ಳಬೇಕು. ಕಥೆ ಅನುಕರಣೆಯಾಗಬೇಕೆಂದಿಲ್ಲ ಮನಸ್ಸಿಗೆ ಮೂಡಿದ ವಿಷಯಗಳ ಕುರಿತು ಕಥೆ ಬರೆಯಬಹುದು. ಲೋಕ ಸಾಹಿತ್ಯದ ಕುರಿತು ತಿಳಿದುಕೊಂಡರೆ ಕಥೆ ಬರೆಯಲು ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದರು.
ಕಥೆ ಎಂದಿಗೂ ದೊಡ್ಡದಾಗಿರದೆ ಸಣ್ಣ ಕಥೆಗಳನ್ನು ಬರೆದರೆ ಆ ಬರಹ ಹೆಚ್ಚಿನ ಜನರನ್ನು ತಲುಪುತ್ತದೆ ಎಂದು ತಿಳಿಸಿದರು.
ಮಡಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ, ಮಾತನಾಡಿ ಕಥೆ ಬರೆಯಬೇಕೆಂದರೆ ಕಥೆಯನ್ನು ಓದುವ ಹಾಗೂ ಕೇಳುವ ಮನಸ್ಸಿರಬೇಕು. ಇಂದಿನ ಕಥಾ ಸ್ಪರ್ಧೆಗೆ ಆಗಮಿಸಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಗಮನಿಸಿದರೆ ಖಂಡಿತ ಮುಂದೊಂದು ದಿನ ಜಿಲ್ಲೆಯಲ್ಲಿ ಉತ್ತಮ ಕಥೆಗಾರು ರೂಪುಗೊಳ್ಳಬಹುದು ಎಂದು ಆಶಿಸಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ಸಂಪತ್ ಕುಮಾರ್ ಮಾತನಾಡಿ, ಕಥೆಯನ್ನು ಬರೆಯುವಾಗ ಜನಪದ ಭಾಷೆಯನ್ನು ಬಳಸಿಕೊಂಡರೆ ಜನರ ಮನಸನ್ನು ತಲುಪುತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮದ್, ವಿದ್ಯಾರ್ಥಿಗಳು ಅವರ ಇಚ್ಛೆಯಂತೆ ಕಲಿತು ಬರೆಯುವ ಕಥೆಗಿಂತ ವಿಷಯ ಆಧಾರಿತ ಕಥೆಯನ್ನು ಬರೆಯಬೇಕು ಎನ್ನುವ ಉದ್ದೇಶದಿಂದ ಪರಿಷತ್ತು ವಿದ್ಯಾರ್ಥಿಗಳಿಗೆ ಆಯ್ಕೆ ವಿಷಯಗಳನ್ನು ನೀಡುತ್ತಿದೆ. ವಿದ್ಯಾರ್ಥಿಗಳು ತಮ್ಮ ಅನುಭವ ಹಾಗೂ ಭಾವನೆಗಳನ್ನು ಕೇಂದ್ರೀಕರಿಸಿ ಜನರ ಮನ ಮುಟ್ಟುವಂತೆ ಕಥೆ ಬರೆಯಲು ಸಾಧ್ಯವಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಪೋಷಕರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿರ್ದೇಶಕ ಮಂಜುನಾಥ್ ಸೇರಿದಂತೆ 150 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್ ಕಾರ್ಯಕ್ರಮ ನಿರೂಪಿಸಿದರು. ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಕಡ್ಲೆರ ತುಳಸಿ ಮೋಹನ್ ಸ್ವಾಗತಿಸಿದರು. ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ರಿಷಿತ್ ಮಾದಯ್ಯ ವಂದಿಸಿದರು.
Breaking News
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್‌ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*