ಮಡಿಕೇರಿ ಆ.28 : ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತವನ್ನು ಒಪ್ಪಿ ಅನೇಕರು ಪಕ್ಷಕ್ಕೆ ಸೇರ್ಪಡೆಯಾಗಲು ಮುಂದೆ ಬರುತ್ತಿದ್ದಾರೆ. ಇದನ್ನು ಆಪರೇಷನ್ ಹಸ್ತ ಎಂದು ಕರೆಯುವುದು ಸರಿಯಲ್ಲ, ಆಪರೇಷನ್ ಎಂಬ ಕೆಟ್ಟ ಶಬ್ಧ ಬಂದಿದ್ದು ಬಿಜೆಪಿಯಿಂದ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರಮೋದಿ ಅವರ ತಂತ್ರಗಾರಿಕೆ ಕರ್ನಾಟಕದಲ್ಲಿ ನಡೆಯುವುದಿಲ್ಲ. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸುತ್ತಿದೆ. ರಾಷ್ಟ್ರೀಯ ನಾಯಕರು ಈಗಾಗಲೇ ಸಭೆ ನಡೆಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನುಡಿದ್ದಂತೆ ನಡೆದಿದ್ದಾರೆ ಎಂದರು.
ಆಪರೇಷನ್ ಹಸ್ತ ಪದ ಬಳಕೆ ನಾವು ಮಾಡಲ್ಲ, ಆಪರೇಷನ್ ಎಂಬ ಕೆಟ್ಟ ಶಬ್ಧ ಬಂದಿದ್ದು ಬಿಜೆಪಿಯಿಂದ. ಹಲವು ರಾಜ್ಯಗಳಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಿದೆ. ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಹಲವರು ಮುಂದೆ ಬರುತ್ತಿದ್ದಾರೆ. ಕಲ್ಯಾಣ ಕರ್ನಾಟಕದ ನಾಯಕರು ಕೂಡ ನನ್ನ ಸಂಪರ್ಕದಲ್ಲಿದ್ದಾರೆ. ಎಲ್ಲರೂ ಕಾಂಗ್ರೆಸ್ ತತ್ವ ಸಿದ್ಧಾಂತವನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗಲು ಮುಂದೆ ಬರುತ್ತಿದ್ದಾರೆ ಎಂದ ಭೋಸರಾಜು, ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಿಲ್ಲದೆ ಅಧಿವೇಶನ ನಡೆದಿದ್ದು, ಇಂದಿಗೂ ಬಿಜೆಪಿ ಪರಿಸ್ಥಿತಿ ಬದಲಾಗಿಲ್ಲ ಎಂದು ವ್ಯಂಗ್ಯವಾಡಿದರು.
ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮತ್ತಿತರ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.
Breaking News
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*