ಮಡಿಕೇರಿ ಆ.28 : ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ಸಲುವಾಗಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಆ.30 ರಂದು ಈ ಸೌಲಭ್ಯ ವಿತರಣೆಯನ್ನು ಫಲಾನುಭವಿಯ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡುವ ಪ್ರಕ್ರಿಯೆಯನ್ನು ಜಾರಿಗೊಳಿಸುವ ಕಾರ್ಯಕ್ರಮ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲೆ ಮಾತ್ರವಲ್ಲದೆ ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ಫಲಾನುಭವಿಗಳು ಕೂಡಾ ಸಮಾವೇಶಗೊಳ್ಳಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಅರ್ಹ ಫಲಾನುಭವಿಗಳ ಅನುಕೂಲಕ್ಕಾಗಿ ನಿಗಮದಿಂದ ಸುಮಾರು 103 ಬಸ್ಸುಗಳನ್ನು ಒಪ್ಪಂದದ ಮೇರೆಗೆ ಕಾರ್ಯಾಚರಣೆ ಮಾಡಲು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅವರಿಂದ ಕೋರಿಕೆ ಬಂದಿದೆ. ಅದರಂತೆ ನಿಗಮದ ಬಸ್ಸುಗಳನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಆದ್ದರಿಂದ ಆಗಸ್ಟ್, 30 ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಮಡಿಕೇರಿ, ವಿರಾಜಪೇಟೆ, ಕುಶಾಲನಗರ, ಸೋಮವಾರಪೇಟೆ, ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆ ಬಸ್ಸುಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕರಾರಸಾ ನಿಗಮದೊಂದಿಗೆ ಸಹಕರಿಸುವಂತೆ ಕ.ರಾ.ರ.ಸಾ.ನಿ.ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಕೋರಿದ್ದಾರೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್‌ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*