ಮಡಿಕೇರಿ ಆ.28 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆಯ ಪರವಾಗಿ ನಡೆಯುತ್ತಿರುವ ಕಾನೂನು ಹೋರಾಟದ ಕುರಿತು ಖ್ಯಾತ ಅರ್ಥಶಾಸ್ತçಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಕೊಡವ ನ್ಯಾಷನಲ್ ಕೌನ್ಸಿಲ್ ನ ಅಧ್ಯಕ್ಷ ಎನ್.ಯು.ನಾಚಪ್ಪ ಅವರೊಂದಿಗೆ ಸಮಾಲೋಚಿಸಿದರು.
ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಇತ್ತೀಚೆಗೆ ಭೇಟಿಯಾದ ಇಬ್ಬರು ಸಿಎನ್‌ಸಿ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ಬಗ್ಗೆ ಚರ್ಚಿಸಿದರು.
ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆಯ ಬೇಡಿಕೆ ನ್ಯಾಯಾಂಗದ ಮೂಲಕ ಈಡೇರಲಿದೆ ಎಂದು ಸಿಎನ್‌ಸಿ ಪರವಾಗಿ ಕಾನೂನು ಹೋರಾಟ ನಡೆಸುತ್ತಿರುವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು ಎಂದು ನಾಚಪ್ಪ ಹೇಳಿದ್ದಾರೆ.
ಇತ್ತೀಚೆಗೆ ಹೈಕೋರ್ಟ್ ಅರ್ಜಿಯ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿತ್ತು.









