ಮಡಿಕೇರಿ ಆ.28 : ಎ.ಕೆ.ಸುಬ್ಬಯ್ಯ, ಪೊನ್ನಮ್ಮ ಎಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊಡಗಿನ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಎ.ಕೆ.ಸುಬ್ಬಯ್ಯ, ಪೊನ್ನಮ್ಮ ಅವರ ಪುತ್ರ, ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ವಿದ್ಯಾರ್ಥಿ ವೇತನ ವಿತರಿಸಿದರು.








