ಸೋಮವಾರಪೇಟೆ ಆ.28 : ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ರೈತನ ಕುಟಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅವರು 15 ಲಕ್ಷ ರೂ.ಗಳ ಪರಿಹಾರದ ಚೆಕ್‌ನ್ನು ವಿತರಿಸಿದರು.
ಸೋಮವಾರ ಸಂಜೆ ಶಾಸಕ ಡಾ.ಮಂತರ್‌ಗೌಡ ಅವರೊಂದಿಗೆ ಆಡಿನಾಡೂರು ಗ್ರಾಮಕ್ಕೆ ತೆರಳಿದ ಸಚಿವರು, ಮೃತ ಈರಪ್ಪ ಅವರ ಪತ್ನಿ ಹೇಮಾವತಿ ಅವರಿಗೆ ಸಾಂತ್ವಾನ ಹೇಳಿದರು.
ಘಟನೆ ನಡೆಯಬಾರದಿತ್ತು. ನಿಮ್ಮ ನೋವು ಅರ್ಥವಾಗುತ್ತದೆ. ಹೋದ ಜೀವವನ್ನು ತಂದು ಕೊಡಲು ಸಾಧ್ಯವಿಲ್ಲ. ದೈರ್ಯ ತೆಗೆದುಕೊಳ್ಳಿ, ಮೊಮ್ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಸಮಾಧಾನ ಪಡಿಸಿದರು.
ಕಾಡಾನೆಗಳು ನಿರಂತರವಾಗಿ ಹಾವಳಿ ಮಾಡುತ್ತಿವೆ. ಸಂಜೆ ಸಮಯದಲ್ಲಿ ಕೃಷಿ ಭೂಮಿಯಲ್ಲಿ ಇರುತ್ತವೆ. ಕೃಷಿ ಹಾನಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ. ಆಡಿನಾಡೂರು ಗ್ರಾಮದಲ್ಲೇ ಮೂವರು ರೈತರು ಕಾಡಾನೆ ದಾಳಿಗೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಗ್ರಾಮಸ್ಥರು ಸಮಸ್ಯೆ ಹೇಳಿಕೊಂಡರು.
ಮನುಷ್ಯ ಮೇಲೆ ದಾಳಿ ಮಾಡುವ ಕಾಡಾನೆಗಳನ್ನು ಗುರುತಿಸಿ, ಹಿಡಿದು ಸ್ಥಳಾಂತರ ಮಾಡಲು ಕೂಡಲೆ ಕ್ರಮಕೈಗೊಳ್ಳಬೇಕು ಎಂದು ಕೊಡಗು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ ಅವರಿಗೆ ಸೂಚಿಸಿದರು. ಕಾಡಾನೆಗಳ ನಿಯಂತ್ರಣಕ್ಕೆ ಯಾರ ಅನುಮತಿಯನ್ನು ಕಾಯುವುದು ಬೇಡ. ಅಧಿಕಾರಿಗಳು ಸ್ಥಳದಲ್ಲೇ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ಅರಣ್ಯ ಇಲಾಖೆ ಮತ್ತು ಸಾಮಾಜಿಕ ಅರಣ್ಯ ಇಲಾಖೆಯಿಂದ ಸುಮಾರು 2.3ಕೋಟಿ ರೂ. ಗಳಷ್ಟು ಬೆಳಹಾನಿ ಪರಿಹಾರ ಹಣವನ್ನು ರೈತರಿಗೆ ವಿತರಿಸಿಲ್ಲ. ಕೂಡಲೆ ಅನುದಾನಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು ಎಂದು ಶಾಸಕ ಡಾ.ಮಂತರ್ ಗೌಡ ಡಿಸಿಎಫ್ ಅವರಿಗೆ ಸೂಚಿಸಿದರು, ಆರ್‌ಆರ್‌ಟಿ ಹಾಗು ಕಾಡಾನೆ ಟಾಸ್ಕ್ ಪೋರ್ಸ್ ಸಿಬ್ಬಂದಿಗಳಿಗೆ ಮೂರು ತಿಂಗಳಿನಿಂದ ಸಂಬಳ ಆಗದಿರುವ ಬಗ್ಗೆ ಶಾಸಕರು ಮಾಹಿತಿ ಪಡೆದರು. ಸಮಸ್ಯೆ ಬಗೆಹರಿಸಲಾಗುವುದು ಎಂದು ಡಿಸಿಎಫ್ ಭರವಸೆ ನೀಡಿದರು.
ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಡಿವೈಎಸ್‌ಪಿ ಗಂಗಾಧರಪ್ಪ, ತಹಸೀಲ್ದಾರ್ ಎಸ್.ಎನ್.ನರಗುಂದ, ಎಸಿಎಫ್ ಗೋಪಾಲ್, ಇನ್ಸ್ಪೆಕ್ಟರ್ ರಾಮಚಂದ್ರನಾಯಕ್, ಆರ್.ಎಫ್.ಒ. ಚೇತನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಪ್ರಮುಖರಾದ ಎಸ್.ಎಂ.ಡಿಸಿಲ್ವಾ, ಬಿ.ಇ.ಜಯೇಂದ್ರ, ಕೆ.ಎ.ಯಾಕುಬ್, ಚೇತನ್ ಮತ್ತಿತರರು ಇದ್ದರು.
Breaking News
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*