ಮಡಿಕೇರಿ ಆ.28 : ಸರ್ಕಾರ ಪ್ರಕಟಿಸಿದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯಡಿ ರಾಜ್ಯದ್ಯಂತ ಸರ್ಕಾರಿ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯನ್ನು ಜೂ.11 ರಂದು ಜಾರಿಗೆ ತರಲಾಯಿತು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸುವುದಕ್ಕೆ ಅವಕಾಶ ನೀಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಆ.27 ರವರೆಗೆ 11,10,983 ಮಂದಿ ಮಹಿಳೆಯರು ಬಸ್‍ನಲ್ಲಿ ಪ್ರಯಾಣ ಬೆಳೆಸಿದ್ದು, 4,10,54,728 ರೂ. ವೆಚ್ಚ ಭರಿಸಲಾಗಿದೆ ಎಂದು ಮಡಿಕೇರಿ ಕೆಎಸ್‍ಆರ್‍ಟಿಸಿ ಘಟಕದ ವ್ಯವಸ್ಥಾಪಕರಾದ ಗೀತಾ ಅವರು ಮಾಹಿತಿ ನೀಡಿದ್ದಾರೆ.
ಉಚಿತ ಬಸ್ ಪ್ರಯಾಣ ಯೋಜನೆಯು ಸಾಮಾಜಿಕ ಸಮಾನತೆಗಾಗಿ ಯಾವುದೇ ತಾರತಮ್ಯವಿಲ್ಲದೆ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಸಹಕಾರಿಯಾಗಿದೆ. ಸಮಾಜ ಏಳಿಗೆ ಕಾಣಬೇಕಾದರೆ ಪುರುಷ ಹಾಗೂ ಮಹಿಳೆಯರ ಪಾಲ್ಗೊಳ್ಳುವಿಕೆ ಅತಿ ಮುಖ್ಯ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಉದ್ಯೋಗಸ್ಥ ಮಹಿಳೆಯರ ಸಂಖ್ಯೆ ಕಡಿಮೆಯಾಗಿದ್ದು, ಶಕ್ತಿ ಯೋಜನೆಯು ಉದ್ಯೋಗಸ್ಥ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸಲು ಪ್ರಮುಖ ಪಾತ್ರ ವಹಿಸಲಿದೆ.
ಗಾಮೆರ್ಂಟ್ಸ್ ಕೆಲಸಗಾರರು, ಮನೆ ಕೆಲಸಗಾರರು, ದಿನಗೂಲಿ ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರು, ರೈತರು, ವ್ಯಾಪಾರಸ್ಥರು ತಿಂಗಳಿಗೆ 15 ರಿಂದ 20 ಸಾವಿರದವರೆಗೆ ಸಂಬಳ ಪಡೆದು ಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಉಚಿತ ಬಸ್ ಯೋಜನೆಯು ತಿಂಗಳಿಗೆ 1500 ರೂ ರಿಂದ 2 ಸಾವಿರ ರೂ ಉಳಿತಾಯ ತಂದಿರುವುದು ಬಡ ಹಾಗೂ ಮಾಧ್ಯಮ ಕುಟುಂಬದ ವರ್ಗದವರಿಗೆ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ.
‘ಸೊಪ್ಪು ಮಾರುವ ಪೂವಮ್ಮ ಸುಂಟಿಕೊಪ್ಪದಿಂದ ದಿನ ಬೆಳಗ್ಗೆ ಬಸ್ಸಿನಲ್ಲಿ ಪ್ರಯಾಣಿಸಿ ಮಡಿಕೇರಿ ನಗರಕ್ಕೆ ಬಂದು ಸೊಪ್ಪು ವ್ಯಾಪಾರ ಮಾಡಿ ಬಸ್ಸಿನಲ್ಲಿ ಹೋಗಬೇಕಾಗಿತ್ತು, ಸೊಪ್ಪು ವ್ಯಾಪಾರ ಮಾಡಿ ಸಿಗುವ ಹಣದಲ್ಲಿ ಜೀವಿಸುತ್ತಿದ್ದ ಈಕೆ ಈಗ ಉಚಿತ ಬಸ್ ಪ್ರಯಾಣ ಯೋಜನೆಯಿಂದ ದಿನಕ್ಕೆ 60 ರೂಪಾಯಿ ಉಳಿತಾಯ ಮಾಡುತ್ತಿದ್ದು ನೆಮ್ಮದಿಯಿಂದ ಜೀವಿಸುತ್ತಿದ್ದೇನೆ ಎಂದು ಪೂವಮ್ಮ ಸರಕಾರವನ್ನು ಶ್ಲಾಘಿಸಿದರು.’
ಮಡಿಕೇರಿ ನಗರ ಕುಶಾಲನಗರ ಮಾರುಕಟ್ಟೆಗಳಿಗೆ ಭೇಟಿ ನೀಡುವ ಕೊಡಗಿನ ಸುತ್ತಮುತ್ತಲ ಹಳ್ಳಿ ಭಾಗದ ಹಲವು ಮಹಿಳಾ ರೈತರು ಸ್ಥಳೀಯವಾಗಿ ಬೆಳೆದ ತರಕಾರಿಗಳನ್ನು ಮಾರಾಟ ಮಾಡಲು ಮನೆ ಮನೆಗೆ ತೆರಳಿ ಶಕ್ತಿ ಯೋಜನೆಯಿಂದ ಪ್ರತಿದಿನ ಸುಮಾರು 200 ರೂಪಾಯಿ ಉಳಿಸುತ್ತಿದ್ದಾರೆ.
ಮಡಿಕೇರಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಐಶ್ವರ್ಯ ಹೇಳುವಂತೆ ಬಡ ಕುಟುಂಬದಲ್ಲಿ ಹುಟ್ಟಿದ ನನಗೆ ದಿನನಿತ್ಯ ಬಸ್ಸಿಗೆ ಹಣ ನೀಡಿ ಪ್ರಯಾಣ ಮಾಡಲು ಅಸಾಧ್ಯವಾಗುತ್ತಿತ್ತು. ಉಚಿತ ಬಸ್ ಪ್ರಯಾಣ ಯೋಜನೆಯಿಂದ ನೆಮ್ಮದಿಯಾಗಿ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿರುವುದು ವಿದ್ಯಾಭ್ಯಾಸ ಮುಂದುವರಿಸಲು ಎಷ್ಟೋ ಜನ ಬಡ ವಿದ್ಯಾರ್ಥಿಗಳಿಗೆ ಸಹಾಯವಾಗಲಿದೆ ಎಂದರು.
ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡದ ಮಹಿಳೆಯರು ಇದೀಗ ಭೇಟಿ ನೀಡುತ್ತಾರೆ, ಕುಟುಂಬಸ್ಥರನ್ನು ಪರಸ್ಪರ ಭೇಟಿ ನೀಡಿ ಮಾತನಾಡುತ್ತಾರೆ, ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುತ್ತಾರೆ. ಇದರಿಂದ ಪ್ರಾಪಂಚಿಕ ಜ್ಞಾನ ಹೆಚ್ಚುತ್ತದೆ. ಶಕ್ತಿ ಯೋಜನೆಯು ಮಹಿಳೆಯರ ಏಳಿಗೆ ಸಾಧಿಸುವಲ್ಲಿ ಅತ್ಯಂತ ಪ್ರಮುಖವಾದ ಪಾತ್ರ ವಹಿಸಿರುವುದು ಶ್ಲಾಘನೀಯ.
ಉಚಿತ ಬಸ್ ಪ್ರಯಾಣದ ಯೋಜನೆಯಿಂದ ವಿದ್ಯಾರ್ಥಿನಿಯರ ಮನಸ್ಸಿನಲ್ಲಿ ಕೂಡ ಮಂದಹಾಸ ಮೂಡಿರುವುದು ಗಮನಿಸಬೇಕಾದ ಅಂಶ. ಬಡ ಪೋಷಕರು ಮಕ್ಕಳನ್ನು ಶಾಲಾ ಕಾಲೇಜಿಗೆ ಕಳುಹಿಸಲು ಶಕ್ತಿ ಯೋಜನೆಯು ಸಹಕಾರಿಯಾಗಿದೆ.
ಯಾವುದೇ ತಾರತಮ್ಯವಿಲ್ಲದೆ ಪ್ರತಿ ಮಹಿಳೆಗೂ ಉಚಿತ ಬಸ್ ಸೌಲಭ್ಯ ಸಿಗುತ್ತಿರುವುದು ಸಮಾನತೆಯನ್ನು ಎತ್ತಿ ಹಿಡಿದಂತೆ. ರಾಜ್ಯವು ಅಭಿವೃದ್ಧಿಪಥದಲ್ಲಿ ಸಾಗಲು ಶಕ್ತಿ ಯೋಜನೆಯು ಮುನ್ನುಡಿಯಾಗಿದೆ. ಶಕ್ತಿ ಯೋಜನೆಯಿಂದ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚುತ್ತದೆ. ದೇಶವು ಆರ್ಥಿಕವಾಗಿ ಮುನ್ನಡೆಯಲು ಸಹಕಾರಿಯಾಗಿದೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*