ಮಡಿಕೇರಿ ಆ.29 : ಅಮ್ಮತ್ತಿಯ ನೇತಾಜಿ ಶಾಲೆಯಲ್ಲಿ ನಡೆದ ಅಮ್ಮತ್ತಿ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿದ್ದಾರೆ.
ಪ್ರಾಥಮಿಕ ಬಾಲಕರ ಹಾಗೂ ಬಾಲಕಿಯರ ವಿಭಾಗದ ಖೊಖೋ ಪಂದ್ಯಾವಳಿಯಲ್ಲಿ ಭಾಗವಹಿಸಿ ವಿಜೇತರಾಗಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ವಿಭಾಗದ ಬಾಲಕರ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇವರು ಶಾಲೆಯ ದೈಹಿಕ ಶಿಕ್ಷಕಿ ಎಂ.ಪಿ.ಮೋನಿಕಾ ಕಾವೇರಿ ಹಾಗೂ ಬಿ.ವಿ.ಲಾವಣ್ಯ ಅವರಲ್ಲಿ ತರಬೇತಿ ಪಡೆದಿದ್ದು, ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ,ಶಾಲಾ ಸಂಯೋಜಕರು, ಶಿಕ್ಷಕ ವೃಂದದವರು ಶ್ಲಾಘಿಸಿ ಅಭಿನಂದಿಸಿದ್ದಾರೆ.