ಮಡಿಕೇರಿ ಆ.29 : ಕೊಡಗು ಜಿಲ್ಲಾ ವ್ಯಾಪ್ತಿಯ ಎಲ್ಲಾ ಆಹಾರ ವಸ್ತುಗಳ/ ಪದಾರ್ಥಗಳ ಉತ್ಪಾದಕರು, ಪ್ಯಾಕರ್‍ಗಳು, ಸಾಗಣಿಕೆದಾರರು, ಸಗಟು/ ಚಿಲ್ಲರೆ ಮಾರಾಟಗಾರರು, ವಿತರಕರು, ಹೋಟೆಲ್ ರೆಸಾರ್ಟ್, ಕ್ಯಾಂಟೀನ್, ಸಂಚಾರಿ ಸಿದ್ಧಪಡಿಸಿದ ಆಹಾರ ಮಾರಾಟಗಾರರು, ವೈನ್‍ಸ್ಟೋರ್, ಕ್ಲಬ್‍ಗಳು, ಬಾರ್ ಅಂಡ್ ರೆಸ್ಟೋರೆಂಟ್‍ಗಳು, ಹೋಮ್ ಸ್ಟೇ ಗಳು, ಬೇಕರಿ, ಸಿಹಿತಿಂಡಿ, ಹಾಲು, ಹಾಲಿನ ಉತ್ಪನ್ನ, ಪ್ಯಾಕೇಜ್ಡ್ ಕುಡಿಯುವ ನೀರು ಘಟಕ/ ಮಾರಾಟಗಾರರು, ಹಣ್ಣು, ತರಕಾರಿಗಳು, ಕೋಳಿ, ಮೀನು, ಮಾಂಸ ಮಾರಾಟ, ರಸ್ತೆ ಬದಿ ಆಹಾರ ಪದಾರ್ಥ ಮಾರಾಟ, ಉಗ್ರಾಣಗಳು, ಸಂಸ್ಕರಣ ಘಟಕಗಳು, ಧಾರ್ಮಿಕ ಸ್ಥಳ, ಸಮುದಾಯ ಭವನ, ಕಲ್ಯಾಣ ಮಂಟಪಗಳಲ್ಲಿ ಪ್ರಸಾದ/ ಊಟೋಪಚಾರ ಸಂಯೋಜಕರು, ಕ್ಯಾಟರಿಂಗ್ ವ್ಯವಹಾರಸ್ಥರು, ನ್ಯಾಯಬೆಲೆ ಅಂಗಡಿ, ಕಚೇರಿಗಳ ಕ್ಯಾಂಟೀನ್, ಸರ್ಕಾರಿ/ ಸರ್ಕಾರೇತರ ವಸತಿ ನಿಲಯಗಳು, ಅಕ್ಷರ ದಾಸೋಹದ ಶಾಲೆಗಳು, ಅಂಗನವಾಡಿಗಳು ಹಾಗೂ ಎಲ್ಲಾ ರೀತಿಯ ಆಹಾರ ಪದಾರ್ಥ ವಹಿವಾಟುದಾರರಿಗೆ ಅಂಕಿತಾಧಿಕಾರಿಗಳ ಕಚೇರಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಮಡಿಕೇರಿ, ಕೊಡಗು ಜಿಲ್ಲೆ ಹಾಗೂ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾರ್ಮಸ್‍ನ ಸಹಭಾಗಿತ್ವದಲ್ಲಿ Fostac Training (Food Safety Training and Certification) ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಾಗಾರ ಸೆ.1 ರಂದು ಬೆಳಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿಯ ಗಾಂಧಿಭವನದಲ್ಲಿ ನಡೆಯಲಿದೆ.
ಈ ತರಬೇತಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ Fostac Training (Food Safety Training and Certification) ಪ್ರಮಾಣಪತ್ರ ನೀಡಲಾಗುವುದು. ಮಡಿಕೇರಿ ನಗರ ವ್ಯಾಪ್ತಿಯ ಸಾರ್ವಜನಿಕರು ಈ ಕಾರ್ಯಗಾರದಲ್ಲಿ ಭಾಗವಹಿಸಿ ಅವಶ್ಯಕವಾದ ಮಾಹಿತಿ ಪಡೆದುಕೊಳ್ಳುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿ ಡಾ.ಇ.ಅನಿಲ್ ಧಾವನ್ ಕೋರಿದ್ದಾರೆ.
Breaking News
- *ಕೊಡಗು ಪತ್ರಿಕಾ ಭವನ ಟ್ರಸ್ಟ್ ನಿಂದ ಗಣರಾಜ್ಯೋತ್ಸವ ಆಚರಣೆ*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಗೌರವಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಗಣತಂತ್ರ ಹಬ್ಬದ ಮೂಲಕ ನಮ್ಮ ದೇಶದ ಸಾಂವಿಧಾನಿಕ ಅನನ್ಯತೆಯನ್ನು ಸಾರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನದ ಆಶಯಗಳಿಗೆ ಬದ್ಧರಾಗಿರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*