ಮಡಿಕೇರಿ ಆ.29 : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆಎಆರ್‍ಟಿಇಟಿ-2023)ಯು ಸೆ.3 ರಂದು ಮೊದಲನೇ ಅಧಿವೇಶನ ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆವರೆಗೆ ಹಾಗೂ 2ನೇ ಅಧಿವೇಶನ ಮಧ್ಯಾಹ್ನ 2 ರಿಂದ ಸಂಜೆ 4.30 ಗಂಟೆವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ), ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು(ಬ್ಲಾಕ್-01), ಸರ್ಕಾರಿ ಪದವಿ ಪೂರ್ವ ಕಾಲೇಜು(ಬ್ಲಾಕ್-02) ಮತ್ತು ನಗರದ ಸಂತ ಮೈಕರಲ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಹೆಚ್ಚಿನ ವಿವರಗಳಿಗೆ ಕಚೇರಿಯ ಪರೀಕ್ಷಾ ನೋಡಲ್ ಅಧಿಕಾರಿ ಕೆ.ಆರ್.ಬಿಂದು ಇವರ ಮೊ.ಸಂ.9611 720320 ನ್ನು ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ ತಿಳಿಸಿದ್ದಾರೆ.








