Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡಗಿನಲ್ಲಿ ಮುಂಗಾರು ಬೆಳೆ ಸಮೀಕ್ಷೆ ಆರಂಭ*
ಇತ್ತೀಚಿನ ಸುದ್ದಿಗಳು

*ಕೊಡಗಿನಲ್ಲಿ ಮುಂಗಾರು ಬೆಳೆ ಸಮೀಕ್ಷೆ ಆರಂಭ*

August 29, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.29 : ಕೊಡಗು ಜಿಲ್ಲೆಯಲ್ಲಿ ಒಟ್ಟು 525 ಹಳ್ಳಿಗಳಿದ್ದು, ಅದರಲ್ಲಿ 2,93,378 ಸರ್ವೆ ನಂಬರ್ ಗಳಿದ್ದು, ಈ ಸರ್ವೆ ನಂಬರ್ ಗಳ ಪೈಕಿ 2,64,086 ತಾಕುಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲಾಗಿದೆ.
ಸರ್ಕಾರದ ಆದೇಶದ ಅನುಸಾರ ಈ ಬಾರಿಯ ರೈತರ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು https://play.google.com/store/apps/details?id=com.csk.PR_Kharif_2023.cropsurvey ಎಂಬ ಹೆಸರಿನ ಮೊಬೈಲ್ ಆಪ್ ಅನ್ನು ಗೂಗಲ್ ಪ್ಲೇ-ಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ. ಮೊಬೈಲ್ ಆಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಒಟ್ಟು 316 ಖಾಸಗಿ ನಿವಾಸಿಗಳನ್ನು ನೇಮಿಸಲಾಗಿರುತ್ತದೆ.
ರೈತರು ಬೆಳೆ ಸಮೀಕ್ಷೆ ಮೊಬೈಲ್ ಆಪ್ ಅನ್ನು ಬಳಸಲು ಹೊಸ ರೈತರ ಬೆಳೆ ಸಮೀಕ್ಷೆ ಅಪ್ಲಿಕೇಷನ್ ಫ್ರೂಟ್ಸ್ (FRUITS) ತಂತ್ರಾಂಶದ ಎಫ್‍ಐಡಿ (FID) ಸಂಖ್ಯೆಗೆ ಜೋಡಣೆಯಾಗಿರುವುದರಿಂದ ಅಪ್ಲಿಕೇಷನ್ ಬಳಸಲು ರೈತರು ಫ್ರೂಟ್ಸ್ ತಂತ್ರಾಂಶದ ಎಫ್‍ಐಡಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿರುತ್ತದೆ. ಮೊದಲಿಗೆ ಗೂಗಲ್ ಪ್ಲೇಸ್ಟೋರ್‍ನಲ್ಲಿ https://play.google.com/store/apps/details?id=com.csk.PR_Kharif_2023.cropsurvey\ ಎಂದು ಹುಡುಕಿ ಡೌನ್‍ಲೋಡ್ ಮಾಡಿಕೊಳ್ಳುವುದು.
ಇಕೆವೈಸಿ ಮೂಲಕ ಆಧಾರ್ ಧೃಡೀಕರಿಸಿ ಎಂದು ಕ್ಲಿಕ್ಕಿಸಿ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ಜನರೇಟ್ ಒಟಿಪಿ ಎಂದು ಕ್ಲಿಕ್ಕಿಸಿ ನಂತರ ಬರುವ 6 ಅಂಕಿಯ ಒಟಿಪಿ ನಮೂದಿಸಿ, ನಂತರ ಮೊಬೈಲ್ ನಂಬರ್ ಅನ್ನು ನಮೂದಿಸಿ 4 ಅಂಕಿಯ ಒಟಿಪಿ ಪಡೆದುಕೊಂಡು ಅಪ್ಲಿಕೇಷನ್ ಸಕ್ರಿಯಗೊಳಿಸಲು ಒಟಿಪಿ ನಮೂದಿಸಿ. ರೈತರ ಆಧಾರ್ ಸಂಖ್ಯೆ ಮತ್ತು ಎಫ್‍ಐಡಿ ಸಂಖ್ಯೆಗೆ ಜೋಡಣೆಯಾದ ಎಲ್ಲಾ ಜಮೀನುಗಳ ಮಾಹಿತಿಗಳು ಡೌನ್‍ಲೋಡ್ ಆಗುತ್ತವೆ.
ಮುಂದಿನ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ದಾಖಲಿಸಬೇಕು. ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿಟ್ಟಿರುವ ಪ್ರದೇಶ, ಕೃಷಿಯೇತರ ಬಳಕೆಗೆ (ಕೊಟ್ಟಿಗೆ, ಕೃಷಿ ಹೊಂಡ, ಮನೆ ಇತರೆ) ಬಳಕೆಯಾದ ಪ್ರದೇಶದ ವಿವರವನ್ನು ಸಹ ದಾಖಲಿಸಬೇಕಾಗಿರುತ್ತದೆ. ರೈತರು ತಾವು ಬೆಳೆದ ಬೆಳೆಯ ಗಿಡದ ಸಂಖ್ಯೆ ಮತ್ತು ಪ್ರತಿ ಗಿಡ ಅಂತರವನ್ನು ನಮೂದಿಸಬೇಕು.
ರೈತರು ತಾವು ಬೆಳೆದ ಪ್ರತಿ ಬೆಳೆಯ ವಿಸ್ತೀರ್ಣದ ಜೊತೆಗೆ ಪ್ರತಿ ಬೆಳೆಯ 2 ಛಾಯಾ ಚಿತ್ರಗಳನ್ನು ತೆಗೆದು ಅಪ್ಲೋಡ್ ಮಾಡಬೇಕಿದೆ. ಹೀಗೆ ಅಪ್ಲೋಡ್ ಮಾಡಲಾದ ಮಾಹಿತಿಯನ್ನು ಪ್ರತಿ ಗ್ರಾಮಕ್ಕೆ ನೇಮಿಸಲಾದ ಸರ್ಕಾರಿ ಅಧಿಕಾರಿಗಳು (ಮೇಲ್ವಿಚಾರಕರು) ಪರಿಶೀಲಿಸಿ ಅನುಮೋದಿಸುತ್ತಾರೆ.
ರೈತರು ಎಫ್‍ಐಡಿ ಸಂಖ್ಯೆ ಹೊಂದಿಲ್ಲದಿದ್ದಲ್ಲಿ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ, ತೋಟಗಾರಿಕೆ ಇಲಾಖೆ ಅಥವಾ ಕಂದಾಯ ಇಲಾಖೆಯನ್ನು ಸಂಪರ್ಕಿಸಿ ಎಫ್‍ಐಡಿ ಸಂಖ್ಯೆ ಮಾಡಿಸಿಕೊಳ್ಳಬಹುದು. ಎಫ್‍ಐಡಿ ಸಂಖ್ಯೆಗೆ ಯಾವುದಾದರೂ ಜಮೀನು ಸೇರ್ಪಡೆ ಆಗದೇ ಇದ್ದಲ್ಲಿ ಸೇರಿಸಿಕೊಳ್ಳಲು ಇದೇ ಮೊಬೈಲ್ ಆಫ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ.
ಹೀಗೆ ಸಂಗ್ರಹಿಸಲಾದ ರೈತರ ಬೆಳೆ ಸಮೀಕ್ಷೆ ಮಾಹಿತಿಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು. ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು. ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿ. ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು. ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ. ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು ಸರ್ಕಾರದ ಯೋಜನೆಗಳಿಗೆ ಬಳಸಲಾಗುತ್ತದೆ.
ಈ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಜಿಲ್ಲೆಯ ರೈತರು ಈ ಅವಕಾಶದ ಸದುಪಯೋಗ ಪಡೆದುಕೊಂಡು “ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ತಾವೇ ಸರ್ಕಾರಕ್ಕೆ ನಿಗದಿತ ಸಮಯದೊಳಗೆ ವರದಿ ಮಾಡಲು” ಈ ಮೂಲಕ ಕೋರಿದೆ.
ಹೆಚ್ಚಿನ ಮಾಹಿತಿಗೆ ಕೇಂದ್ರ ಕಚೇರಿಯ ಸಹಾಯವಾಣಿ ಸಂಖ್ಯೆ 7848914915 ಮತ್ತು ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ 8448447715, ತಮ್ಮ ಗ್ರಾಮದ ಖಾಸಗಿ ನಿವಾಸಿಯನ್ನು ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು, ತಮ್ಮ ಗ್ರಾಮದ ಗ್ರಾಮ ಲೆಕ್ಕಿಗರನ್ನು ಅಥವಾ ನಾಡ ಕಚೇರಿ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲರಾಜ್ ರಂಗರಾವ್ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಶಾಸಕ ಎ.ಎಸ್.ಪೊನ್ನಣ್ಣ*
Next Article *ನುಡಿದಂತೆ ನಡೆದ ಸರ್ಕಾರ : ನೂರು ದಿನದಲ್ಲಿ 4 ಗ್ಯಾರಂಟಿ ಜಾರಿ*

Website design development company services in Mangalore

Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.