ಮಡಿಕೇರಿ ಆ.29 : ದೈವಜ್ಞ ಬ್ರಾಹ್ಮಣ ಸಮಾಜದ ವತಿಯಿಂದ ನೂಲು ಹುಣ್ಣಿಮೆಯ ಪ್ರಯುಕ್ತ ಪ್ರತಿವರ್ಷದಂತೆ ಈ ಬಾರಿ ಕೂಡ ಋಗುಪಾಕರ್ಮ ಹೋಮ ಮತ್ತಿತರ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಜರುಗಿತು.
ನಗರದ ಮಹದೇವಪೇಟೆಯ ಶೇಖರ್ ಕಾಂಪ್ಲೆಕ್ಸ್ ನಲ್ಲಿ ಸಮಾಜದ ಪುರೋಹಿತ ಬಿ.ಹೆಚ್.ಉಲ್ಲಾಸ್ ಅವರ ನೇತೃತ್ವದಲ್ಲಿ ಋಗುಪಾಕರ್ಮ ಹೋಮ ನಡೆಯಿತು. ದೈವಜ್ಞ ಬ್ರಾಹ್ಮಣ ಸಮಾಜದ ಅಧ್ಯಕ್ಷ ಬಿ.ವಿ.ರೋಷನ್ ಹಾಗೂ ಹೆಚ್ಚಿನ ಸಂಖ್ಯೆಯ ಸದಸ್ಯರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.











