ಮಡಿಕೇರಿ ಆ.30 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವದ ಅಂಗವಾಗಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ, ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ತಿಳಿಸಿದ್ದಾರೆ.
ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ (ಮಹಾವೀರ ಚಕ್ರ ಪುರಸ್ಕೃತರು) ಅವರ 58ನೇ ಪುಣ್ಯ ಸ್ಮರಣೆ ದಿನಾಚರಣೆ ಸೆ.7 ರಂದು ಜರುಗಲಿದ್ದು, ಆ ಪ್ರಯುಕ್ತ ಕೊಡಗು ಜಿಲ್ಲಾ ಸಂಸ್ಥೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ‘ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ’ ಅವರ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.
ಸೆ.7 ರಂದು ಮಧ್ಯಾಹ್ನ 2.30 ಗಂಟೆಗೆ ಮಡಿಕೇರಿಯ ಪತ್ರಿಕಾ ಭವನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳು ಸೆ.4 ಒಳಗಾಗಿ ಪ್ರಬಂಧವನ್ನು ಪ್ರೆಸ್ ಕ್ಲಬ್ ಕಚೇರಿಗೆ ತಲುಪಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಪ್ರೆಸ್ ಕ್ಲಬ್ ಖಜಾಂಚಿ ಬೊಳ್ಳಜಿರ ಬಿ. ಅಯ್ಯಪ್ಪ 9880778047 ಅವರನ್ನು ಸಂಪರ್ಕಿಸಲು ಕೋರಲಾಗಿದೆ.