ಮಡಿಕೇರಿ ಆ.30 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವು ಆ.31 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕುಳುವ ಸಮಾಜದ ಜಿಲ್ಲಾಧ್ಯಕ್ಷರಾದ ಎಚ್.ಪಿ. ಮಹೇಶ್, ಮಡಿಕೇರಿ ಸಾಹಿತಿಗಳು ಟಿ.ಪಿ.ರಮೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.









