ವಿರಾಜಪೇಟೆ ಆ.30 : ಸದೃಢ ರಾಷ್ಟ್ರದ ನಿರ್ಮಾಣದಲ್ಲಿ ಎನ್.ಎಸ್.ಎಸ್. ಘಟಕಗಳು ಮಹತ್ತರ ಪಾತ್ರವನ್ನು ವಹಿಸುತ್ತಿವೆ ಎಂದು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ.ಐಸಾಕ್ ರತ್ನಕರ್ ಅಭಿಪ್ರಾಯಪಟ್ಟರು.
ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ಘಟಕ ಹಾಗೂ ದೈಹಿಕ ಶಿಕ್ಷಣ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ತೊಡಗುವುದರಿಂದ ಮಾನಸಿಕ, ದೈಹಿಕ ಸ್ಥಿರತೆ ಹೊಂದಬಹುದು. ವಿದ್ಯಾರ್ಥಿಗಳು ಸದೃಢ ರಾಷ್ಟ್ರದ ನಿರ್ಮಾಣಕ್ಕೆ ಕೈ ಜೋಡಿಸಬೇಕೆಂದರು.
ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಹಾಕಿ ಮಾಂತ್ರಿಕ ದ್ಯಾನ್ ಚಂದ್ ಅವರ ನೆನಪಿಗೆ ಆಯೋಜಿಸಲಾಗುತ್ತದೆ. ಸರ್ಕಾರವು ಫಿಟ್ ಇಂಡಿಯಾ ಎಂಬ ವಿಷಯದ ಮೇಲೆ ಈ ಕ್ರೀಡಾಕೂಟಗಳನ್ನು ಆಯೋಜಿಸಲು ನಿರ್ದೇಶನ ನೀಡಿರುತ್ತದೆ. ವಿಶ್ವವಿದ್ಯಾಲಯವು ಸಹ ಸಹಕಾರ ನೀಡಿದ್ದು, ವಿದ್ಯಾರ್ಥಿಗಳು ಇಂತಹ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿರುವುದು ಗಮನಾರ್ಹ ವಿಷಯವಾಗಿದೆ ಎಂದರು.
ಕ್ರೀಡಾಕೂಟವು ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ನಡೆಯಿತು. ಇದೇ ಸಂದರ್ಭ ವಿದ್ಯಾರ್ಥಿಗಳು ಫಿಟ್ ಇಂಡಿಯಾದ ಪ್ರತಿಜ್ಞೆಯನ್ನು ಸ್ವೀಕರಿಸಿದರು.
ಬಾಲಕ ಹಾಗೂ ಬಾಲಕಿಯರಿಗೆ ಆಯೋಜಿಸಲಾಗಿದ್ದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ ದ್ವಿತೀಯ ಬಿಬಿಎ ಪ್ರಥಮ, ಪ್ರಥಮ ಬಿಬಿಎ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು.
ಬಾಲಕಿಯರ ವಿಭಾಗದಲ್ಲಿ ಅಂತಿಮ ಬಿಸಿಎ ಪ್ರಥಮ, ಅಂತಿಮ ಬಿಬಿಎ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಬಿ.ಎನ್ ಶಾಂತಿಭೂಷಣ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಬಿ.ವಿ. ರಾಜ ರೈ, ಉಪನ್ಯಾಸಕರು, ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಹಾಜರಿದ್ದರು.
Breaking News
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*