ವಿರಾಜಪೇಟೆ ಆ.30 : ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದುಕೊಂಡಿದೆ.
ಈ ತಂಡ ಮಂಗಳೂರಿನಲ್ಲಿ ನಡೆಯಲಿರುವ ಮುಂದಿನ ಪಂದ್ಯಾಟಕ್ಕೆ ಆಯ್ಕೆಯಾಗಿದೆ.
ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕರಾದ ಅಂತೋಣಿ, ಶಿನಿ ತರಬೇತಿ ನೀಡಿದ್ದಾರೆ.









