ಮಡಿಕೇರಿ ಆ.31 : ಕಾಡಾನೆ ದಾಳಿಗೆ ಸಿಲುಕಿ ಶಾರ್ಪ್ ಶೂಟರ್ ವೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಸಕಲೇಶಪುರದ ಆಲೂರು ತಾಲ್ಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ.
ಅರಣ್ಯ ಇಲಾಖೆಯ ಶಾರ್ಪ್ ಶೂಟರ್ ವೆಂಕಟೇಶ್ (55) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡು ತಿರುಗಾಡುತ್ತಿದ್ದ ಕಾಡಾನೆ ಭೀಮನಿಗೆ ಹೆಚ್ಚಿನ ಚಿಕಿತ್ಸೆ ನೀಡುವ ಸಲುವಾಗಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತು. ಅರೆವಳಿಕೆ ನೀಡುವುದಕ್ಕಾಗಿ ಶಾರ್ಪ್ ಶೂಟರ್ ವೆಂಕಟೇಶ್ ಅವರು ಮುಂದಾದಾಗ ಏಕಾಏಕಿ ದಾಳಿ ಮಾಡಿದ ಭೀಮ ತುಳಿದು ಹಾಕಿತು.
ಘಟನೆಯಿಂದ ತೀವ್ರವಾಗಿ ಗಾಯಗೊಂಡ ವೆಂಕಟೇಶ್ ಅವರನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.








