ಮಡಿಕೇರಿ ಆ.31 : ಗೃಹ ಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡ ಜಿಲ್ಲೆಯ 79,659 ಮಂದಿಗೆ 15,23,18,000 ರೂ.ಗಳನ್ನು ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆಯೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಪ್ರಕಟಣೆ ತಿಳಿಸಿದೆ.
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2ಸಾವಿರ ರೂ.ಗಳನ್ನು ನೇರ ನಗದು ವರ್ಗಾವಣೆ (ಡಿ.ಟಿ.ಟಿ.) ಮಾಡುವ ಗೃಹಲಕ್ಷ್ಮಿ ಯೋಜನೆಯನ್ನು ಆ.30 ರಾಜ್ಯಮಟ್ಟದಲ್ಲಿ ವಿದ್ಯುಕ್ತವಾಗಿ ಚಾಲನೆಗೊಂಡಿದ್ದು, ಇಂದು ಮೊದಲ ಹಂತದಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ 1,31,863 ಫಲಾನುಭವಿಗಳಿದ್ದು, ಈ ಪೈಕಿ 106198 ಫಲಾನುಭವಿಗಳು ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿದ್ದು, ಮೊದಲ ಹಂತದ ಹಣ ವರ್ಗಾವಣೆಯಾಗಿದ್ದು, ಮುಂದಿನ ಹಂತದಲ್ಲಿ ಉಳಿದವರಿಗೆ ಹಣ ವರ್ಗಾವಣೆಯಾಗಲಿದೆ.








