ವಿರಾಜಪೇಟೆ ಆ.31 : ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ “ರಕ್ಷಾ ಬಂಧನ ನಡೆಸಲಾಯಿತು.
ಮಂಗಳೂರಿನ ರಾಷ್ಟ್ರೀಯ ಸ್ವಯಂ ಸಂಘದ ವಿಭಾಗ ಪ್ರಚಾರ ಪ್ರಮುಖರಾದ ಸೂರಜ್ ಕುಮಾರ್ ವಿದ್ಯಾರ್ಥಿಗಳಿಗೆ ರಕ್ಷಾ ಬಂಧನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ರಾಷ್ಟ್ರದ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ, ಪ್ರತಿಯೊಬ್ಬ ಯುವಜನತೆ ತನ್ನನ್ನು ರಾಷ್ಟ್ರ ರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳ ಪಾತ್ರವನ್ನು ಸವಿವರವಾಗಿ ತಿಳಿಸಿದರು.
ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್ ಕಾರ್ಲಾ ಅವರು ವಿದ್ಯಾರ್ಥಿಗಳಿಗೆ ರಕ್ಷಾ ಬಂಧನ ಆಚರಣೆ ಬಗ್ಗೆ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎಂ.ನಾಣಯ್ಯ ಉಪಸ್ಥಿತರಿದ್ದರು.
ಕಾಲೇಜಿನ ಉಪನ್ಯಾಸಕ ವೃಂದದವರು ಹಾಗೂ ಸಿಬ್ಬಂದಿಗಳು ಹಾಜರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಪರಸ್ಪರ ರಕ್ಷೆಯನ್ನು ವಿತರಿಸಿ ಕಟ್ಟಿಸಲಾಯಿತು.









