ಮಡಿಕೇರಿ ಆ.31 : ಮಡಿಕೇರಿ ವಿಭಾಗದ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಕರ್ತವ್ಯದಲ್ಲಿದ್ದ, ಇದೀಗ ರಾಮನಾಥಪುರಕ್ಕೆ ವರ್ಗಾವಣೆಗೊಂಡಿರುವ ವ್ಯವಸ್ಥಾಪಕರನ್ನು ತಕ್ಷಣ ಸೇವೆಯಿಂದ ವಜಾಗೊಳಿಸಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವ್ಯವಸ್ಥಾಪಕಿಯ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದಿಂದ ಕೂಡಿರುವುದರಿಂದ ಕೇವಲ ವರ್ಗಾವಣೆ ಒಂದೇ ಶಿಕ್ಷೆಯಾಗಬಾರದು, ತಕ್ಷಣ ಇವರನ್ನು ಸೇವೆಯಿಂದ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಕೆಎಸ್‌ಆರ್‌ಟಿಸಿ ನೌಕರ ಹೆಬ್ಬಾಲೆಯ ಅಭಿಷೇಕ್ ಎಂಬುವವರು ಇತ್ತೀಚೆಗೆ ಕೆಎಸ್‌ಆರ್‌ಟಿಸಿ ಡಿಸಿ ಹಾಗೂ ವ್ಯವಸ್ಥಾಪಕರ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪ್ರಯತ್ನಕ್ಕೆ ವ್ಯವಸ್ಥಾಪಕರ ಕಿರುಕುಳವೇ ಕಾರಣವೆಂದು ಅಭಿಷೇಕ್ ಆರೋಪಿಸಿದ್ದಾರೆ. ಕಳೆದ 8 ವರ್ಷಗಳಿಂದ ತಮ್ಮ ಪ್ರಭಾವ ಬಳಸಿ ಮಡಿಕೇರಿಯಲ್ಲೇ ಸೇವೆ ಸಲ್ಲಿಸುತ್ತಿದ್ದ ವ್ಯವಸ್ಥಾಪಕರ ವಿರುದ್ಧ ಕಿರುಕುಳದ ಆರೋಪ ಹೊರಿಸಿ ಇಲ್ಲಿನ ನೌಕರರು ಹಾಗೂ ಕಾರ್ಮಿಕ ವರ್ಗ ಹಲವು ಬಾರಿ ಲಿಖಿತ ರೂಪದಲ್ಲಿ ದೂರು ನೀಡಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿರಲಿಲ್ಲ.
ನೌಕರರ ಇಚ್ಛೆಯಂತೆ ವ್ಯವಸ್ಥಾಪಕರನ್ನು ವರ್ಗಾವಣೆಗೊಳಿಸಲೇಬೇಕೆಂದು ಕಳೆದ 3 ತಿಂಗಳಿನಿಂದ ನಾವುಗಳು ಮಾಡಿದ ಪ್ರಯತ್ನಕ್ಕೆ ಇದೀಗ ಫಲ ದೊರೆಯಿತು. ಆದರೆ ವರ್ಗಾವಣೆಯಾದರೂ ಕಳೆದ ಮೂರು ವಾರಗಳಿಂದ ಬಿಡುಗಡೆಗೊಳ್ಳದೆ ಮತ್ತೆ ತಮ್ಮ ಪ್ರಭಾವ ಬಳಸಿ ಮಡಿಕೇರಿಯಲ್ಲೇ ಠಿಕಾಣಿ ಹೂಡಿದ್ದರು. ಇವರಿಂದ ಮತ್ತಷ್ಟು ಕಿರುಕುಳ ಎದುರಿಸಬೇಕಾಗುತ್ತದೆ ಎನ್ನುವ ಆತಂಕದಲ್ಲಿ ಅಭಿಷೇಕ್ ಎಲ್ಲರೆದುರೇ ವಿಷ ಸೇವಿಸಿದ್ದಾರೆ.
ಇದೊಂದು ಗಂಭೀರ ಸ್ವರೂಪದ ಪ್ರಕರಣವಾಗಿದ್ದು, ವ್ಯವಸ್ಥಾಪಕಿಯನ್ನು ವರ್ಗಾವಣೆಗೊಳಿಸಿದರಷ್ಟೇ ನೊಂದವರಿಗೆ ನ್ಯಾಯ ಸಿಗಲು ಸಾಧ್ಯವಿಲ್ಲ ಎಂದು ಚಂದ್ರಕಲಾ ಅಭಿಪ್ರಾಯಪಟ್ಟಿದ್ದಾರೆ.
ಸುದೀರ್ಘ ಕಾಲ ಮಡಿಕೇರಿ ಡಿಪೋದಲ್ಲೇ ಸೇವೆ ಸಲ್ಲಿಸಿದ ವ್ಯವಸ್ಥಾಪಕಿ ಹೊರ ರಾಜ್ಯಗಳಿಗೆ ಇದ್ದ ಕೆಲವು ಬಸ್ ಮಾರ್ಗಗಳನ್ನು ರದ್ದುಗೊಳಿಸಿ ಕೆಎಸ್‌ಆರ್‌ಟಿಸಿಗೆ ಸಾಕಷ್ಟು ನಷ್ಟ ಉಂಟು ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ನೌಕರರಿಗೆ ಕಿರುಕುಳ ನೀಡಿರುವ ಆರೋಪ ಮಾತ್ರವಲ್ಲದೆ ಮತ್ತಿತರ ದೂರುಗಳು ಕೂಡ ಕೇಳಿ ಬಂದಿರುವ ಹಿನ್ನೆಲೆ ವ್ಯವಸ್ಥಾಪಕಿ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ವ್ಯವಸ್ಥಾಪಕಿಯ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿದ್ದರೂ ಸೂಕ್ತ ಕ್ರಮ ಕೈಗೊಳ್ಳದ ಮೇಲಧಿಕಾರಿ ವಿರುದ್ಧವೂ ತನಿಖೆ ಕೈಗೊಳ್ಳಬೇಕು ಎಂದು ಚಂದ್ರಕಲಾ ಆಗ್ರಹಿಸಿದ್ದಾರೆ.
Breaking News
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*
- *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆ*
- *ವೀರ ಸೇನಾನಿಗಳಿಗೆ ಅಗೌರವ : ಕೊಡವ ಮಕ್ಕಡ ಕೂಟ ಖಂಡನೆ : ಕಿಡಿಗೇಡಿಯ ಬಂಧನಕ್ಕೆ ಆಗ್ರಹ*
- *ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*